ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ 3 ನಕ್ಸಲರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

STF-Naxal--01

ರಾಯ್‍ಪುರ್, ಜೂ15-ಛತ್ತೀಸ್‍ಗಢದ ನಕ್ಸಲರ ಹಾವಳಿ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ನಿಗ್ರಹ ಕಾರ್ಯಾಚರಣೆಯನ್ನು ಯೋಧರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇಂದು ಬೆಳಗ್ಗೆ ಚಿಂಟಗುಫಾ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಗಟ್ಟಪಾಡ್ ಮತ್ತು ತೋಕನ್‍ಪಲ್ಲಿ ಗ್ರಾಮಗಳ ನಡುವೆ ಅರಣ್ಯದಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಮೃತರಾದ ಮಾವೋವಾದಿಗಳಿಂದ ರೈಫಲ್‍ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

Facebook Comments

Sri Raghav

Admin