ಈರುಳ್ಳಿ ಬೆಲೆ ಏರಿಕೆ ವಿರುದ್ಧ ಚಿದಂಬರಂ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಡಿ.5- ಗಗನಕ್ಕೇರಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಕಾಂಗ್ರೆಸ್‍ನ ಇತರ ನಾಯಕರು ಸಂಸತ್ ಭವನದ ಮುಂದೆ ಇಂದು ಪ್ರತಿಭಟನೆ ನಡೆಸಿದರು.

ಐಎನ್‍ಕ್ಸ್ ಮೀಡಿಯಾ ಹಗರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಜೈಲು ಸೇರಿದ್ದ ಚಿದಂರಂಬ ಮೊನ್ನೆಯಷ್ಟೇ ಜಾಮೀನಿನ ಮೇರೆಗೆ ಹೊರಬಂದ ನಂತರ ಚಿದಂಬರಂ, ಕೇಂದ್ರ ಸರ್ಕಾರದ ವಿರುದ್ಧ ನಡೆಸಿದ ಮೊದಲ ಪ್ರತಿಭಟನೆ ಇದಾಗಿದೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಗೌರವ ಗೋಗಯ್ ಅವರೊಂದಿಗೆ ಸಂಸತ್ ಭವನದ ಮುಂದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.  ಕಾಂಗ್ರೆಸ್ ಸಂಸದರು ಮತ್ತು ಪಕ್ಷದ ಇತರ ನಾಯಕರು ಈರುಳ್ಳಿ ತುಂಬಿದ ಬುಟ್ಟಿಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಈರುಳ್ಳಿ ಬೆಲೆಯನ್ನು ತಕ್ಷಣ ಕಡಿಮೆ ಮಾಡಿ ರೈತರ ಹಿತಾಸಕ್ತಿ ರಕ್ಷಿಸುವಂತೆ ಆಗ್ರಹಿಸಿದರು.

ರಾಜ್ಯಸಭಾ ಸದಸ್ಯರಾಗಿರುವ ಚಿದಂಬರಂ ನಂತರ ಸಂಸತ್‍ನ ಚಳಿಗಾಲದ ಅಧಿವೇಶನದಲ್ಲಿ ಇಂದಿನ ಪಾಲ್ಗೊಳ್ಳಲು ತೆರಳಿದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್‍ನಲ್ಲಿ ನ್ಯಾಯದ ಪರ ಧ್ವನಿ ಎತ್ತುವ ನನ್ನನ್ನು ಸರ್ಕಾರ ಕಟ್ಟಿಹಾಕಲು ಸಾಧ್ಯವಿಲ್ಲ ನಾನು ಹಿಂದಿರುಗಿರುವುದಕ್ಕೆ ಖುಷಿಯಾಗಿದೆ. ಕೇಂದ್ರದ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ ಎಂದರು.

Facebook Comments