‘ಆರ್ಥಿಕ ಸ್ಥಿತಿ ಹದಗೆಟ್ಟಿರುವುದು ದೇವರಾಟ’ ಎಂದ ನಿರ್ಮಲಾ ಹೇಳಿಕೆಗೆ ಚಿದು ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.29- ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ದೇವರಾಟ ಎಂಬ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವ್ಯಂಗ್ಯವಾಡಿದ್ದಾರೆ.

ಪ್ರಸ್ತುತ ಹಣಕಾಸು ಸ್ಥಿತಿ ದೇವರಾಟ ಎಂದು ನಿರ್ಮಲಾ ಅವರು ಹೇಳಿಕೆ ನೀಡಿದ್ದಾರೆ. ಆದರೆ ಕೊರೊನಾ ವೈರಸ್ ಕಾಣಿಸಿಕೊಳ್ಳುವ ಮುನ್ನ ಇದ್ದ ಆರ್ಥಿಕ ದುಃಸ್ಥಿತಿಗೆ ಕಾರಣರ್ಯಾರು ಎಂದು ಚಿದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರು ಕೊರೊನಾ ಮಹಾಮಾರಿ ಕಾಣಿಸಿಕೊಂಡ ನಂತರ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇದಕ್ಕೆ ದೇವರಾಟವೇ ಕಾರಣ ಎಂದಿದ್ದರು.

ಈ ಹೇಳಿಕೆಗೆ ತಿರುಗೇಟು ನೀಡಿರುವ ಚಿದು ಅವರು ಸೋಂಕು ಕಾಣಿಸಿಕೊಂಡ ನಂತರ ಆರ್ಥಿಕ ದುಃಸ್ಥಿತಿ ಎದುರಾಗಿದೆ ಎನ್ನುವುದಾದರೆ 2017-2018 , 2018-2019 ಮತ್ತು 2019-2020ರ ಅವಯಲ್ಲಿನ ಆರ್ಥಿಕ ದಿವಾಳಿಗೆ ಕಾರಣರ್ಯಾರು ಎಂದು ಪ್ರಶ್ನಿಸಿದ್ದಾರೆ.

ಜಿಎಸ್‍ಟಿ ಬಾಕಿಯಿಂದ ಎದುರಾಗಿರುವ ನಷ್ಟವನ್ನು ಆಯಾ ರಾಜ್ಯಗಳೇ ಭರಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಹೇಳಿಕೆಗೂ ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟರೆ ಅದನ್ನು ನಿಭಾಯಿಸುವ ಹೊಣೆ ಕೇಂದ್ರ ಸರ್ಕಾರದ್ದು. ಈ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವವರು ಗಮನ ಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇಂದಿನ ಪರಿಸ್ಥಿತಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿ ಸ್ಪಷ್ಟ ಕಾನೂನು ಉಲ್ಲಂಘನೆಯಾಗಿದೆ ಎಂದು ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

Facebook Comments

Sri Raghav

Admin