ಬ್ಲಾಕ್ ಮನಿ ಪ್ರಕರಣ : ಚಿದು ಪತ್ನಿ, ಪುತ್ರನ ಪ್ರತಿಕ್ರಿಯೆ ಕೋರಿದ ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.16- ಕಾಳಧನ (ಬ್ಲಾಕ್ ಮನಿ) ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸಲ್ಲಿಸಿರುವ ಮನವಿ ಕುರಿತು ಪ್ರತ್ಯುತ್ತರ ನೀಡುವಂತೆ ಕಾಂಗ್ರೆಸ್ ಮುಖಂಡ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪತ್ನಿ-ವಕೀಲೆ ನಳಿನಿ ಹಾಗೂ ಪುತ್ರ-ಉದ್ಯಮಿ ಕಾರ್ತಿ ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಇಂದು ಸೂಚನೆ ನೀಡಿದೆ.

ಕಪ್ಪುಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧದ ಕ್ರಿಮಿನಲ್ ಪ್ರಾಸಿಕ್ಯೂಷನ್ ವಿಚಾರಣೆ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಐಟಿ ಇಲಾಖೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ಪೀಠ ಈ ಸಂಬಂಧ ನಳಿನಿ ಮತ್ತು ಕಾರ್ತಿಕ್ ಚಿದಂಬರಂ ಅವರಿಗೆ ಪ್ರತ್ಯುತ್ತರ ನೀಡುವಂತೆ ನಿರ್ದೇಶನ ನೀಡಿತ್ತು.

ಚಿದಂಬರಂ ಅವರ ಪತ್ನಿ, ಪುತ್ರ ಕಾರ್ತಿ ಮತ್ತು ಸೊಸೆ ಶ್ರೀನಿಧಿ ಅವರಿಂದ ಸಾಗರೋತ್ತರ ಸ್ವತ್ತುಗಳು ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ ಘೋಷಣೆ ಮಾಡಿಲ್ಲ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ ಮೇಲ್ಮನವಿ ಅರ್ಜಿ ಮೇರೆಗೆ ಸುಪ್ರೀಂಕೋರ್ಟ್ ಪ್ರತ್ಯುತ್ತರ ನೀಡುವಂತೆ ಚಿದಂಬರಂ ಕುಟುಂಬಕ್ಕೆ ಆದೇಶ ನೀಡಿದೆ.

Facebook Comments