ಪಾಗಲ್ ಪ್ರೇಮಿಯಿಂದ ಯುವತಿಗೆ ಚಾಕು ಇರಿತ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು,ಸೆ.19- ಪ್ರೀತಿಯನ್ನು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಪಾಗಲ್ ಪ್ರೇಮಿ ಪರಾರಿಯಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಎನ್‍ಆರ್‍ಪುರ ತಾಲ್ಲೂಕಿನ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದ ಮಿಥುನ್ ಎಂಬಾತ ಖಾಂಡ್ಯದ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನು ಎನ್ನಲಾಗಿದೆ.

ಯುವಕನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಕುಪಿತಗೊಂಡ ಯುವಕ ನಿನ್ನೆ ಮಧ್ಯಾಹ್ನ ಯುವತಿಗೆ ಚಾಕುವಿನಿಂದ ಇರಿದು ತಲೆಮರೆಸಿಕೊಂಡಿದ್ದಾನೆ. ಈ ಘಟನೆಯನ್ನು ನೋಡಿದ ಸಾರ್ವಜನಿಕರು ಗಾಯಾಳು ಯುವತಿಯನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಿದ್ದಾರೆ.

ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಮುಂದುವರೆದಿದೆ.

Facebook Comments