ವೈದ್ಯರ ನಿರ್ಲಕ್ಷ್ಯ: ಬಾಣಂತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಫೆ.5- ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಉಷಾ (24)ಸಾವನ್ನಪ್ಪಿರುವ ಬಾಣಂತಿ. ವೈದ್ಯ ಬಾಲಕೃಷ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ನಂತರ ಕೊಪ್ಪ ತಹಶೀಲ್ದಾರ್ ಕಚೇರಿಗೆ ತೆರಳಿದ ಕುಟುಂಬಸ್ಥರು ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಧರಣಿ ನಡೆಸಿದ್ದಾರೆ. ಹೆರಿಗೆ ವೇಳೆಯಲ್ಲಿ ವೈದ್ಯರು, ದಾದಿಯರು ನಿರ್ಲಕ್ಷ್ಯ ತೋರಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜನವರಿ 25ರಂದು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಉಷಾರನ್ನು ದಾಖಲಿಸಲಾಗಿತ್ತು. ಹೆರಿಗೆ ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಕುಟುಂಬದವರಿಗೆ ಸೂಚಿಸಿದ್ದಾರೆ. ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆ ಉಷಾ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಾಗಿದೆ.

Facebook Comments