ಕೊರೋನಾ 3ನೇ ಅಲೆ ಭೀತಿ : ಜಿಲ್ಲಾ ಮಟ್ಟದಲ್ಲಿ ಮಕ್ಕಳ ಆರೈಕೆ ಕೇಂದ್ರ ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ.11- ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ದುಷ್ಪರಿಣಾಮ ನೀಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳಿಗೆ ಪ್ರತ್ಯೇಕ ಆರೈಕೆ ಕೇಂದ್ರ ಆರಂಭ ಮಾಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು.

ಜಿಕೆವಿಕೆಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಹಾಗೂ ಸೋಂಕಿತರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದರು. ಮೂರನೇ ಅಲೆ ಎದುರಿಸಲು ನಾವು ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದೇವೆ, ಮಕ್ಕಳ ಆರೋಗ್ಯ ದೃಷ್ಠಿಯಿಂದ 3-4 ದಿನಗಳ ಒಳಗೆ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ ಎಂದರು.

ಪ್ರತಿ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಆರೈಕೆ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಪತ್ರ ಬರೆಯುತ್ತೇನೆ ಎಂದು ಅಶೋಕ್ ಹೇಳಿದರು.

# ಸಹಕಾರ ಅಗತ್ಯ:
ಕೊರೊನಾ ಸೋಂಕು ನಿವಾರಣೆ ಉದ್ದೇಶದಿಂದ ಜಾರಿಮಾಡಲಾಗಿರುವ ಲಾಕ್‍ಡೌನ್ ಯಶಸ್ವಿಯಾಗಬೇಕಾದರೆ ಜನರ ಸಹಕಾರ ಅಗತ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮ ಮುಂದೆ ಬಲಪ್ರಯೋಗ ಮಾಡದೇ ಲಾಕ್‍ಡೌನ್ ಯಶಸ್ವಿಗೊಳಿಸುವ ಅನಿವಾರ್ಯತೆ ಇದೆ. ಪೊಲೀಸರಿಗೆ ಸಾರ್ವಜನಿಕರ ಮೇಲೆ ಬಲಪ್ರಯೋಗ ಮಾಡದಂತೆ ಸೂಚನೆ ನೀಡಿದ್ದೇನೆ.

ಮಹಾಮಾರಿ ವಿರುದ್ಧ ನಾವು ಗೆಲುವು ಸಾಧಿಸಬೇಕಾದರೆ ಜನ ಅಗತ್ಯ ಸಹಕಾರ ನೀಡಬೇಕೆಂದು ಬೊಮ್ಮಾಯಿ ಮನವಿ ಮಾಡಿಕೊಂಡರು. ವಸತಿ ಸಚಿವ ವಿ.ಸೋಮಣ್ಣ, ಶಾಸಕ ಬೈರತಿ ಸುರೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Facebook Comments

Sri Raghav

Admin