ಬೆಂಗಳೂರಿನಲ್ಲಿ 2 ಹಂತದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.13- ಸಂಭಾವ್ಯ ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಗರದಲ್ಲಿ 12ರಿಂದ 17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮೊದಲನೇ ಹಂತದಲ್ಲಿ 12ರಿಂದ 17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುವುದು. ಇದಕ್ಕಾಗಿ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಎರಡನೇ ಹಂತದಲ್ಲಿ 12ಕ್ಕಿಂತ ಕೆಳಗಿನ ವಯೋಮಾನದ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಲಸಿಕೆ ಕಡ್ಡಾಯ ಎಂಬ ಕಾನೂನು ಎಲ್ಲಿಯೂ ಇಲ್ಲ. ಹೀಗಾಗಿ, ನಾವು ಯಾರನ್ನೂ ಒತ್ತಾಯ ಮಾಡಲು ಸಾಧ್ಯವಿಲ್ಲ ಎಂದು ನುಡಿದರು.

ವಯಸ್ಕರರಿಗೆ ಲಸಿಕೆ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಯಾರು ಲಸಿಕೆ ಪಡೆದಿಲ್ಲವೂ ಅವರನ್ನು ಸ್ವಯಂ ಸೇವಾ ಸಂಘಟನೆ, ಸರ್ಕಾರೇತರ ಸಂಸ್ಥೆಗಳ ಮೂಲಕ ಸಂಪರ್ಕಿಸಿ ಲಸಿಕೆ ನೀಡಲಾಗುವುದು ಎಂದು ಗುಪ್ತ ಹೇಳಿದರು.

ಸದ್ಯ ಹೊಸದಾಗಿ ಲಸಿಕೆ ಪಡೆಯುವ ಮಕ್ಕಳ ಸಂಖ್ಯೆ ನಗರದಲ್ಲಿ ಎಷ್ಟಿದೆ ಎಂಬುವುದರ ಬಗ್ಗೆಯೂ ಸಮೀಕ್ಷೆ ಮಾಡಲಾಗುತ್ತಿದೆ ಜತೆಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.ಎಲ್ಲಿಯೂ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

Facebook Comments