4 ಮಕ್ಕಳ ಕತ್ತು ಸೀಳಿ ಹತ್ಯೆಗೈದ ಕ್ರೂರಿ ತಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು ಮಕ್ಕಳು ಕೊಲೆಯಾಗಿರುವ ದುರ್ದೈವಿಗಳು.

ನೂಹ್ಸ್ ಪಿಪ್ರೋಲಿ ಗ್ರಾಮದ ಮನೆಯೊಂದರಲ್ಲಿ ನಾಲ್ಕು ಮಕ್ಕಳು ಕತ್ತು ಸೀಳಿದ ಸ್ಥಿತಿಯಲ್ಲಿ ದೊರೆತಿದ್ದವು. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಮಕ್ಕಳ ತಾಯಿಯೂ ಅಡುಗೆ ಮನೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದು ಪತ್ತೆಯಾಗಿತ್ತು.

ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆ ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನತದೃಷ್ಟ ಮಕ್ಕಳ ತಾಯಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ತನ್ನ ಮೊದಲ ಪತಿಯನ್ನು ತೊರೆದು ಮತ್ತೊಬ್ಬನೊಂದಿಗೆ ವಾಸಿಸುತ್ತಿದ್ದ ಫರ್ಮಿನಾ ಯಾರು ಇಲ್ಲದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆ. ಆದರೆ, ಮಕ್ಕಳನ್ನು ಕೊಲೆ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ.

Facebook Comments