ಬಾಹ್ಯಾಕಾಶ ನಿಲ್ದಾಣದಲ್ಲಿ 6 ತಿಂಗಳು ತಂಗಲಿರುವ ಚೀನಿ ಗಗನಯಾತ್ರಿಗಳು 

ಈ ಸುದ್ದಿಯನ್ನು ಶೇರ್ ಮಾಡಿ

ಬೀಜಿಂಗ್,ಅ.16-ಚೀನಾದ ಮೂವರು ಗಗನಯಾತ್ರಿಗಳು ಬಾಹ್ಯಾಕಾಶ ನಿಲ್ದಾಣ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಮೂವರು ಗಗನಯಾತ್ರಿಗಳು ಬಾಹ್ಯಾಕಾಶ ನಿಲ್ದಾಣಕ್ಕೆ ಸುರಕ್ಷಿತವಾಗಿ ತಲುಪಿದ್ದು ಅವರು ಆರು ತಿಂಗಳ ಕಾಲ ಬಾಹ್ಯಾಕಾಶ ನಿಲ್ದಾಣ ಪೂರ್ಣಗೊಳಿಸುವ ಕಾರ್ಯದಲ್ಲಿ ನಿರತರಾಗಿರಲಿದ್ದಾರೆ ಎಂದು ಚೀನಾ ಬಾಹ್ಯಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.

ಝೈ ಯೀಗಾಂಗ್, ವಾಂಗ್ ಯಾಪಿಂಗ್ ಹಾಗೂ ಯೇ ಗೌಂಗು ಅವರುಗಳು ತೈನೆ ಕೋರ್ ಮಾಡ್ಯೂಲ್ ಬಾಹ್ಯಾಕಾಶ ನಿಲ್ದಾಣ ಯೋಜನಾ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.ವಾಂಗ್ ಅವರು ಇದೇ ಮೊದಲ ಬಾರಿಗೆ ಬಾಹ್ಯಾಕಾಶ ಯೋಜನೆಯಲ್ಲಿ ಪಾಲ್ಗೊಂಡಿರುವ ಚೀನಾದ ಪ್ರಪ್ರಥಮ ಮಹಿಳಾ ಗಗನಯಾತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಚೀನಾದ ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೂವರು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ನಿರಂತರ ಆರು ತಿಂಗಳ ಕಾಲ ಕಾರ್ಯಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಬಾಹ್ಯಾಕಾಶ ಸಂಶೋಧನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಚೀನಾ ಈ ಹಿಂದೆ ಮೂವರು ಗಗನ ಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

ಇದೀಗ ಮತ್ತೆ ಮೂವರು ಗಗನ ಯಾತ್ರಿಗಳು ಬಾಹ್ಯಾಕಾಶ ಸಂಶೋಧನೆಗೆ ತೆರಳಿದ್ದು ಅವರು ಆರು ತಿಂಗಳ ಕಾಲ ಬಾನಂಗಳದಲ್ಲೇ ಇರಲಿದ್ದು, ಬಾಹ್ಯಾಕಾಶ ನಿಲ್ದಾಣ ಯೋಜನೆ ಪೂರ್ಣಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Facebook Comments

Sri Raghav

Admin