ಉಪಚುನಾವಣೆ ರಿಸಲ್ಟ್ : ಕುಂದಗೋಳ ಕೈ ಮಡಿಲಿಗೆ, ಚಿಂಚೋಳಿ ಬಿಜೆಪಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಕುಂದಗೋಳ/ಚಿಂಚೋಳಿ,ಮೇ 23- ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೊಳ, ಚಿಂಚೋಳಿ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಜಯಗಳಿಸಿದರೆ, ಚಿಂಚೋಳಿಯಲ್ಲಿ ಬಿಜೆಪಿಯ ಅನಾಶ್ ಜಾಧವ್ ಗೆಲುವು ದಾಖಲಿಸಿದ್ದಾರೆ.

ಎರಡೂ ಕ್ಷೇತ್ರಗಳು ಮೈತ್ರಿ ಸರ್ಕಾರ ಹಾಗೂ ಬಿಜೆಪಿ ಪಕ್ಷಕ್ಕೆ ಭಾರೀ ಪ್ರತಿಷ್ಠೆಯಾಗಿ ಪರಿಣುಸಿತ್ತು. ಎರಡೂ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿದ್ದವು. ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಅನಾಶ್ ಜಾಧವ್ 8 ಸಾರ ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ 1452 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಕಳೆದ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ಕೇವಲ 642 ಮತಗಳ ಅಂತರದಿಂದ ಸೋಲನ್ನು ಅನುಭಸಿದ್ದರು. ಸಚಿವ ಶಿವಳ್ಳಿಯವರ ಅಕಾಲಿಕ ನಿಧನದಿಂದ ಎದುರಾದ ಉಪ ಚುನಾವಣೆಯಲ್ಲಿ ಕುಸುಮಾ ಶಿವಳ್ಳಿಯವರು ಕೇವಲ 1452 ಮತಗಳಿಂದ ಜಯ ಸಾಧಿಸಿದ್ದಾರೆ.

ಅತ್ತ ಚಿಂಚೋಳಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ತೆರವಾಗಿದ್ದ ಸ್ಥಾನಕ್ಕೆ ತಮ್ಮ ಪುತ್ರ ಅನಾಶ್ ಜಾಧವ್ ಅವರನ್ನು ಕಣಕ್ಕಿಳಿಸಿದ್ದ ಡಾ.ಉಮೇಶ್ ಜಾಧವ್ ಅವರು ಪುತ್ರನನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಕಲಬುರಗಿ ಕ್ಷೇತ್ರದಲ್ಲಿ ಸಂಸದರಾಗಿ ಜಯಭೈೀರಿ ಬಾರಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin