ಮೈಸೂರು ವಿವಿಯಲ್ಲಿ ಚೀನಾ ವಿದ್ಯಾರ್ಥಿಗಳಿಗೆ ಅವಧಿಗೂ ಮುನ್ನ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 28- ಚೀನಾ ವಿದ್ಯಾರ್ಥಿಗಳಿಗೆ ಮೈಸೂರು ವಿವಿಯಲ್ಲಿ ಪರೀಕ್ಷೆಗಳನ್ನು ಮುಂಚಿತವಾಗಿ ನಡೆಸಿ ಸ್ವದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನೂರಕ್ಕೂ ಹೆಚ್ಚು ಮಂದಿ ಚೀನಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಜೂ.15ರಂದು ಪರೀಕ್ಷೆ ನಡೆಯಲಿದೆ.

ಆದರೆ, ಚೀನಾದ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಸೂರು ವಿವಿಯನ್ನು ಸಂಪರ್ಕಿಸಿ ಚೀನಾ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬೇಗ ನಡೆಸಿ ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವಂತೆ ಮನವಿ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಜೂ.15ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಜೂ.1ರಿಂದ ಆರಂಭಿಸಿ ಜೂ.6ಕ್ಕೆ ಮುಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಹೇಮಂತ್‍ಕುಮಾರ್ ತಿಳಿಸಿದ್ದಾರೆ.

6ಕ್ಕೆ ಪರೀಕ್ಷೆ ಪೂರ್ಣಗೊಂಡ ನಂತರ 7 ಅಥವಾ 8ರಂದು ಮೈಸೂರಿನಿಂದ ಚೀನಾಕ್ಕೆ ಕಳುಹಿಸಲಾಗುವುದು. ಮಾಹಿತಿ-ತಂತ್ರಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಈ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

Facebook Comments