ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 50 ಸಾವಿರ ದಂಡ ವಿಧಿಸಿದ ಬಿಬಿಎಂಪಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.21- ಮೊನ್ನೆ ನಡೆದ ಆಸ್ಟ್ರೇಲಿಯಾ-ಇಂಡಿಯಾ ಏಕದಿನ ಪಂದ್ಯಾವಳಿ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ 50 ಸಾವಿರ ರೂ. ದಂಡ ವಿಧಿಸಿದೆ.

ಆಸ್ಟ್ರೇಲಿಯಾ-ಇಂಡಿಯಾ ಪಂದ್ಯಾವಳಿ ವೇಳೆ ಪೂರ್ವ ವಿಭಾಗದ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಕಪ್ ಹಾಗೂ ಫ್ಲೆಕ್ಸ್, ಬ್ಯಾನರ್ ಪ್ರದರ್ಶನ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿಗೆ 50 ಸಾವಿರ ರೂ. ದಂಡ ವಿಧಿಸಿದ್ದಾರೆ.

ಈ ಹಿಂದೆ ಹಲವಾರು ಭಾರಿ ಪ್ಲಾಸ್ಟಿಕ್ ಬಳಕೆ ಕುರಿತು ತಿಳುವಳಿಕೆ ನೀಡಿದ್ದರೂ ಸಹ ಪರಿಶೀಲನೆ ವೇಳೆ ಫುಡ್ ಸ್ಟಾಲ್‍ಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ಕಂಡುಬಂದಿದೆ. ಹೀಗಾಗಿ ದಂಡ ವಿಧಿಸಿರುವುದಾಗಿ ಬಿಬಿಎಂಪಿ ಉಪ ಆರೋಗ್ಯ ಅಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments