ಸುಟ್ಟ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಅ.11- ಸುಟ್ಟ ಸ್ಥಿತಿಯಲ್ಲಿ ವೃದ್ಧರೊಬ್ಬರ ಶವ ಸರ್ಕಾರಿ ಶಾಲೆ ಆವರಣದಲ್ಲಿ ಪತ್ತೆಯಾಗಿದೆ. ಹುಲ್ಲೂರು ಗ್ರಾಮದ ನಿವಾಸಿ ಸಂಜೀವರೆಡ್ಡಿ(62) ಎಂಬುವರ ದೇಹ ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ನಿನ್ನೆ ಗಾಂಧಿನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿ ಎಲ್ಲರನ್ನೂ ಮಾತನಾಡಿಸಿಕೊಂಡು ರಾತ್ರಿ ಅಲ್ಲಿಂದ ಸ್ವಗ್ರಾಮಕ್ಕೆ ತೆರಳಿದ್ದರು. ಆದರೆ ಇಂದು ಬೆಳಗ್ಗೆ ಸರ್ಕಾರಿ ಶಾಲೆಯ ಆವರಣದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments