ಚಿತ್ರದುರ್ಗದಲ್ಲಿ ಮತ್ತೆ ಮೂವರಿಗೆ ಕೋವಿಡ್, ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಜು.3- ಜಿಲ್ಲೆಯಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 3 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ.

ನಿರಂತರವಾಗಿ ಕೋವಿಡ್ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಏರು ಮುಖದಲ್ಲಿ ಸಾಗಿದ್ದು ಸಂಪೂರ್ಣ ಸಮುದಾಯಗಳಲ್ಲಿ ಸೋಂಕು ಹಬ್ಬುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಸೋಂಕಿತರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 3 ಜನರಿಗೆ ಪಾಸಿಟಿವ್ ಬಂದಿದ್ದು, ಇನ್ನೂ ಕೆಲವು ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ತಿಳಿಸಿದ್ದಾರೆ.

ಒಟ್ಟು 77 ಪ್ರಕರಣಗಳ ಪೈಕಿ ಈಗಾಗಲೆ 45 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 32 ಕೋವಿಡ್ ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.ಚಿತ್ರದುರ್ಗದ ಕೋವಿಡ್ ಆಸ್ಪತ್ರೆ, ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್, ಹಿರಿಯೂರು ತಾಲ್ಲೂಕು ಮರಡಿಹಳ್ಳಿ ಕೋವಿಡ್ ಹೆಲ್ತ್ ಕೇರ್ ಸೆಂಟರ್, ಭರಮಸಾಗರ, ಮೊಳಕಾಲ್ಮೂರು ತಾಲ್ಲೂಕು ರಾಂಪುರ ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

Facebook Comments