ಕೋಟೆ ನಾಡು ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಮೇ 23-ಕೋಟೆ ನಾಡು ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ.ನಾರಾಯಣಸ್ವಾಮಿ ಗೆಲುವು ಸಾಧಿಸಿದ್ದಾರೆ. ಎ.ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಸುಮಾರು 60 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಪರಾಭವಗೊಳಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ದಾರೆ.

ಪ್ರಾರಂಭಿಕ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಕೊನೆ ಸುತ್ತಿನವರೆಗೂ ಅದೇ ಅಂತರವನ್ನು ಕಾಯ್ದುಕೊಂಡು ಗೆಲುವು ಸಾಧಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತ್ತು. ಟಿಕೆಟ್ ಹಂಚಿಕೆ ಸಂಬಂಧ ನಾರಾಯಣಸ್ವಾಮಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನ ಉಂಟಾಗಿತ್ತು.

ನಾರಾಯಣಸ್ವಾಮಿ ಅವರ ಬದಲಿಗೆ ಬೇರೊಬ್ಬರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಅದರೆ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಮಧ್ಯಪ್ರವೇಶದಿಂದಾಗಿ ಎಲ್ಲರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ಚಂದ್ರಪ್ಪ ಮೈತ್ರಿ ಅಭ್ಯರ್ಥಿಯಾಗಿದ್ದರಿಂದ ಗೆಲುವು ಸಾಧಿಸಬಹುದೆಂಬ ನಿರೀಕ್ಷೆಯಿತ್ತು. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಚಾರವನ್ನು ಇಲ್ಲಿಂದಲೇ ಆರಂಭಿಸಿದ್ದರು.ಕ್ಷೇತ್ರದಲ್ಲಿ ಬೀಸಿದ ನರೇಂದ್ರ ಮೋದಿ ಅಲೆ ಕಾಂಗ್ರೆಸ್ ಅಭ್ಯರ್ಥಿಗೆ ಮುಳುವಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin