1314 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಈ ಸುದ್ದಿಯನ್ನು ಶೇರ್ ಮಾಡಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯಲ್ಲಿ ಖಾಲಿ ಇರುವ 1314 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 26-10-2019 ಆರಂಭಿಕ ದಿನಾಂಕವಾಗಿದ್ದು 09-12-2019 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯಲ್ಲಿ ಖಾಲಿ ಇರುವ 1314 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಪೂರೈಸಿದ ಅರ್ಜಿದಾರರು. ಕನಿಷ್ಠ 21 ವರ್ಷ ರಿಂದ 35 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ: ಸೇವಾ ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ, ಭೌತಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ :

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ