SSLC ಮುಗಿಸಿದವರಿಗೆ ಸಿಐಎಸ್ಎಫ್ ನಲ್ಲಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯಲ್ಲಿ ಖಾಲಿ ಇರುವ 914 ಹುದ್ದೆಯ ನೇಮಕಾತಿಗಾಗಿ ಸಿಐಎಸ್ಎಫ್ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ಕಾನ್ಸ್‌ಟೇಬಲ್(ಟ್ರೇಡ್ಸ್‌ಮೆನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

23 ನೇ ಸೆಪ್ಟೆಂಬರ್ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 22 ನೇ ಅಕ್ಟೋಬರ್ 2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕಾನ್ಸ್‌ಟೇಬಲ್(ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೀನಿಯರ್ ಸೆಕೆಂಡರಿ ಸ್ಕೂಲ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಶೈಕ್ಷಣಿಕ ಸಂಬಂಧಿತ ನೀಡಲಾದ ಪ್ರಮಾಣಪತ್ರ.  ಜೊತೆಗೆ ಆಯಾ ಟ್ರೇಡ್‌ಮನ್‌ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ ಮತ್ತು ಇತರೆ ಅರ್ಹತೆ ಹೊಂದಿರಬೇಕು.ಅಧಿ ಸೂಚನೆಯ ಕೊನೆಯ ದಿನಾಂಕದಂತೆ 18 ರಿಂದ 23 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ: ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಇನ್ನು ಅರ್ಜಿದಾರರಿಗೆ ಆಯ್ಕೆ ಪ್ರಕ್ರಿಯೆ ಫಿಸಿಕಲ್ ಎಫಿಸಿಯನ್ಸಿ ಟೆಸ್ಟ್, ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್, ದಾಖಲಾತಿ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಪಟ್ಟಿ ಆಧಾರದ ಮೇಲೆ ನಡೆಯಲಿದೆ. ಅರ್ಜಿ ಶುಲ್ಕವನ್ನು ಕರ್ನಾಟಕ ಅಭ್ಯರ್ಥಿಗಳು ‘Assistant Commandant / DDO, CISF SZ, HQrs, Chennai’ ಹೆಸರಿನಲ್ಲಿ ಪೋಸ್ಟಲ್‌ ಆರ್ಡರ್ ಮಾಡಬೇಕು.

ಅರ್ಜಿ ಸಲ್ಲಿಕೆ ಹೇಗೆ? :ಕರ್ನಾಟಕದ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ವಿಳಾಸ -DIG, CISF(South Zone) HQrs, ‘D’ Block, RajajiBhavan, Besant Nagar, Chennai-600090, Tamil Nadu ಕ್ಕೆ ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಭೇಟಿ ನೀಡಿ: https://www.cisf.gov.in/

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ