ಪೌರಾಡಳಿತ ಇಲಾಖೆಯಲ್ಲಿನ ಖಾಲಿ ಹುದ್ದೆ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.23- ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇದ್ದು, ಅವುಗಳ ಪೈಕಿ 1000 ಹುದ್ದೆಗಳನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಉಳಿದ ಖಾಲಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಕೆ.ಸಿ.ಕೊಂಡಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದ 239 ಸ್ಥಳೀಯ ಸಂಸ್ಥೆಗಳಲ್ಲಿ 39,000 ಹುದ್ದೆಗಳು ಮಂಜೂರಾಗಿವೆ.

11,990 ಖಾಯಂ ಹುದ್ದೆ, 12,405 ಹೊರಗುತ್ತಿಗೆ ಸೇರಿ 24,000 ಮಂದಿ ಕೆಲಸ ಮಾಡುತ್ತಿದ್ದಾರೆ. ಇನ್ನು 9000 ಹುದ್ದೆಗಳು ಖಾಲಿ ಇದ್ದು, 7771 ನೇಮಕಾತಿ ಅಂತಿಮಗೊಂಡಿದೆ. 2137 ಪೌರ ಕಾರ್ಮಿಕರ ನೇಮಕಾತಿಗೆ ಜಿಲ್ಲಾಧಿಕಾರಿಗೆ ಅಧಿಕಾರ ನೀಡಿರುವುದಾಗಿ ಹೇಳಿದರು

Facebook Comments