ಸಿಜೆ ವಿರುದ್ಧ ಲೈಂಗಿಕ ಕಿರುಕುಳ: ನ್ಯಾ. ರಮಣ ನೇಮಕಕ್ಕೆ ಮಹಿಳೆ ಆಕ್ಷೇಪ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.25-ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಲಾಯ್ ಅವರ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪವನ್ನು ವಿಚಾರಣೆ ನಡೆಸಲು ರಚಿಸಲಾಗಿರುವ ಆಂತರಿಕ ಸಮಿತಿಯಲ್ಲಿ ನ್ಯಾಯಮೂರ್ತಿ ರಮಣ ಅವರನ್ನು ನೇಮಕ ಮಾಡಿರುವುದನ್ನು ದೂರು ನೀಡಿರುವ ಮಹಿಳೆ ವಿರೋಧಿಸಿದ್ದಾರೆ.

ಸಮಿತಿ ಸದಸ್ಯರಿಗೆ ಪತ್ರ ಬರೆದಿರುವ ಮಹಿಳೆ, ನ್ಯಾಯಸಮ್ಮತವಾದ ವಿಚಾರಣೆ ನಡೆಯಬೇಕಾದರೆ ನ್ಯಾ.ಎನ್.ವಿ.ರಮಣ ಅವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಸಿಜೆಐ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಮೂರ್ತಿಗಳಾ ಎಸ್.ಎ.ಬಾಬ್ಡೆ, ಎನ್.ವಿ.ರಮಣ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ಸಮಿತಿಯನ್ನು ರಚಿಸಲಾಗಿದೆ.

ನಾನು ಸಿಜೆಐ ಅವರ ಗೃಹ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ, ನ್ಯಾ. ರಮಣ ಸಿಜೆಐನ ಆಪ್ತ ಮಿತ್ರ, ಅಷ್ಟೇ ಅಲ್ಲದೇ ಕುಟುಂಬ ಸದಸ್ಯರಿದ್ದಂತೆ. ಸಿಜೆಐ ನಿವಾಸಕ್ಕೆ ಅವರು ಆಗಾಗ್ಗೇ ಹೋಗುತ್ತಿರುತ್ತಾರೆ.

ಈ ಹಿನ್ನೆಲೆಯಲ್ಲಿ ನನ್ನ ಪ್ರಕರಣದ ವಿಚಾರಣೆ ನಡೆಸುವಾಗ ನ್ಯಾಯಸಮ್ಮತ ವಿಚಾರಣೆ ನಡೆಯುವುದಿಲ್ಲ ಎಂಬ ಆತಂಕ ನನ್ನನ್ನು ಕಾಡುತ್ತಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟೇ ವಿಧಿಸಿರುವ ವಿಶಾಖಾ ಮಾರ್ಗಸೂಚಿಗಳ ಪ್ರಕಾರ ಇಂತಹ ಪ್ರಕರಣಗಳ ವಿಚಾರಣೆ ನಡೆಸುವಾಗ ಮಹಿಳಾ ನ್ಯಾಯಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿರಬೇಕು,

ಆದರೆ ಈ ಪ್ರಕರಣದಲ್ಲಿ ಇರುವ ಒಬ್ಬರೇ ಮಹಿಳಾ ನ್ಯಾಯಮೂರ್ತಿ ಇದ್ದಾರೆ ಎಂದು ಆರೋಪ ಮಾಡಿರುವ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಹಿಳೆಯ ಈ ಆಕ್ಷೇಪದಿಂದ ಈಗ ಹೊಸ ತಕರಾಗು ಉದ್ಭವಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ