ಶಕ್ತಿ ಕೇಂದ್ರ ವಿಧಾನಸೌಧದ ಬಾಗಿಲಿಗೆ ಸಿಎಂ ನಮಸ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28- ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಬಾಗಿಲಿಗೆ ನಮಸ್ಕರಿಸಿ ಒಳಪ್ರವೇಶಿಸಿದರು. ರಾಜಭವನದಲ್ಲಿಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧಕ್ಕೆ ಆಗಮಿಸಿದರು.

ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಂದಿನಿಂದಲೇ ಕೆಲಸ ಆರಭಿಸಿದರು. ಬಳಿಕ ಉನ್ನತಾಧಿಕಾರಿಗಳ ಸಭೆಯಲ್ಲಿ ಬೊಮ್ಮಾಯಿ ಪಾಲ್ಗೊಂಡರು.

Facebook Comments