21ರಂದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.18- ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇದೇ 21ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ 21ರಂದು ವೈಮಾನಿಕ ಸಮೀಕ್ಷೆ ನಡೆಸುವಂತೆ ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

ವಾಯುಭಾರ ಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಜಲಾಶಯ ಹೆಚ್ಚುವರಿ ನೀರು ಹರಿದು ಬರುತ್ತಿರುವ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಭೀಮಾ ಮತ್ತು ಕೃಷ್ಣಾ ನದಿಗೆ ವ್ಯಾಪಕ ಪ್ರಮಾಣದ ನೀರು ಹರಿಯುತ್ತಿರುವ ಪರಿಣಾಮ ಮನೆ ಮಠ, ಆಸ್ತಿ ಪಾಸ್ತಿ, ಜನ ಜಾನುವಾರುಗಳು , ನಷ್ಟ ಉಂಟಾಗಿರುವ ಕಾರಣ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಹೇಳಿದೆ.

ಸ್ಥಳೀಯ ಜಿಲ್ಲಾಡಳಿತ ವತಿಯಿಂದ ತಕ್ಷಣವೇ ಅಗತ್ಯ ಪರಿಹಾರ ಕೈಗೊಳ್ಳಲಾಗುತ್ತಿದ್ದು , ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣವನ್ನು ತಿಳಿಯಲು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Facebook Comments