ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.25-ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಅಶ್ಲೇಷ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹ ಪೀಡಿತ ಸ್ಥಳಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವೈಮಾನಿಕ ಸಮೀಕ್ಷೆ ನಡೆಸಿ ನೊಂದ ಕುಟುಂಬಗಳಿಗೆ ಎಲ್ಲ ನೆರವು ನೀಡುವ ಅಭಯ ನೀಡಿದರು.

ಬೆಳಗಾವಿ, ಗದಗ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್‍ವೈ ಅವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಆರ್. ಅಶೋಕ್, ಬಸವರಾಜ್ ಬೊಮ್ಮಾಯಿ, ಶಶಿಕಲಾ ಜೊಲ್ಲೆ , ರಮೇಶ್ ಜಾರಕಿಹೊಳಿ ಮತ್ತಿತರರು ಸಾಥ್ ನೀಡಿದರು.

ಇಂದು ಐದು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಯಡಿಯೂರಪ್ಪನವರು ಸದ್ಯದಲ್ಲೇ ಮಡಿಕೇರಿ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಭೇಟಿ ಕೊಟ್ಟು ಸಂತ್ರಸ್ತರ ಸಮಸ್ಯೆ ಆಲಿಸಿದರು.  ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿದ ಬಿಎಸ್‍ವೈ ಅವರಿಗೆ ರೈತರ ಪ್ರತಿಭಟನೆ ಹಾಗೂ ಕಪ್ಪು ಬಾವುಟದ ಸ್ವಾಗತ ದೊರೆಯಿತು.

ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಸಿ ಕೆಲ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಅಲ್ಲಿಂದ ನೇರವಾಗಿ ಜಿಲ್ಲಾಕಾರಿಗಳ ಕಚೇರಿಗೆ ಆಗಮಿಸಿದ ಬಿಎಸ್‍ವೈ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು, ಅಕಾರಿಗಳು ಸೇರಿದಂತೆ ಜನಪ್ರತಿನಿಗಳ ಸಭೆ ನಡೆಸಿ ಮಾಹಿತಿ ಪಡೆದರು.

ಪ್ರವಾಹದಿಂದ ಹಾನಿಗೊಳಗಾಗಿರುವ ಬೆಳೆಗಳು, ಕೊಚ್ಚಿ ಹೋಗಿರುವ ಜಮೀನು, ಜಾನುವಾರು ಸೇರಿದಂತೆ ಯಾವ ಯಾವ ಪ್ರದೇಶಗಳಲ್ಲಿ ಎಷ್ಟು ಹಾನಿಗೊಳಗಾಗಿದೆ ಎಂಬುದನ್ನು ಜಿಲ್ಲಾಕಾರಿಯಿಂದ ವಿವರ ಪಡೆದುಕೊಂಡರು.

ಬೆಳಗಾವಿ ರಾಜ್ಯದಲ್ಲೇ 2ನೇ ಅತಿದೊಡ್ಡ ಜಿಲ್ಲೆಯಾಗಿದೆ. ಕಳೆದ ವರ್ಷವೂ ಭೀಕರ ಪ್ರವಾಹ ಉಂಟಾಗಿ ರೈತರು ಮನೆಮಠ, ಆಸ್ತಿ ಎಲ್ಲವನ್ನು ಕಳೆದುಕೊಂಡಿದ್ದರು. ಪುನಃ ಇದೀಗ ನೆರೆ ಹಾವಳಿ ಉಂಟಾಗಿ ಸಾವಿರಾರು ಜನರು ಸಂಕಷ್ಟದಲ್ಲಿದ್ದಾರೆ ಎಂದು ಜಿಲ್ಲಾಕಾರಿಗಳು ಸಿಎಂ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ ಅನೇಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಅಂದಾಜು 2000 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ವರದಿ ನೀಡಿದರು.

ಬಳಿಕ ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಫ್ಟರ್‍ನಲ್ಲಿ ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.  ಮಧ್ಯಾಹ್ನ 12.30ಕ್ಕೆ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಸಂಪುಟ ಸಹೊದ್ಯೋಗಿಗಳು ನೆರೆಪೀಡಿತ ಪ್ರದೇಶಗಳಿಗೆ ತೆರಳಿ ವೈಮಾನಿಕ ಸಮೀಕ್ಷೆ ನಡೆಸಿದರು.

ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಕೆಲ ಸಚಿವರು ಮುಖ್ಯಮಂತ್ರಿ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಆಲಮಟ್ಟಿ ಜಲಾಶಯ ಹೊರಭಾಗದಲ್ಲಿ ಸಿಎಂ ಯಡಿಯೂರಪ್ಪನವರು ಅಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟ ಕುರಿತಂತೆ ಮಾಹಿತಿ ಪಡೆದುಕೊಂಡರು.

ಜಿಲ್ಲೆಯ ಐದಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಮನೆ, ಬೆಳೆ ಕೊಚ್ಚಿಹೋಗಿವೆ. ಜನರು ಸಂಕಷ್ಟ ಸ್ಥಿತಿಯಲ್ಲಿದ್ದು, ಪರಿಹಾರ ಕಾರ್ಯವನ್ನು ಕೈಗೊಂಡಿದ್ದೇವೆ ಎಂದು ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಬಾಗಲಕೋಟೆ ಸಮೀಕ್ಷೆ ಮುಗಿದ ನಂತರ ಯಡಿಯೂರಪ್ಪನವರು ವಿಜಯಪುರದಲ್ಲೂ ವೈಮಾನಿಕ ಸಮೀಕ್ಷೆ ಕೈಗೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಶಾಸಕರು ಹಾಗೂ ಅಕಾರಿಗಳು ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಇಂಚಿಂಚಾಗಿ ವಿವರಿಸಿದರು.

Facebook Comments

Sri Raghav

Admin