ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ : ಸಂಯಮ ಕಾಪಾಡಿಕೊಳ್ಳುವಂತೆ ಸಿಎಂ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.28-ಬೆಳಗಾವಿಯ ಪಿರನವಾಡಿಯಲ್ಲಿ ಸ್ವತಂತ್ರ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಕುರಿತಂತೆ ಉಂಟಾಗಿರುವ ವಿವಾದ ಕುರಿತಂತೆ ಪ್ರತಿಯೊಬ್ಬರು ಸಂಯಮ ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೊಬ್ಬರು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಬಾರದು. ಯಾರೇ ಏನೇ ಇದ್ದರೂ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಸಲಹೆ ಮಾಡಿದರು.

ಈಗಾಗಲೇ ಬೆಳಗಾವಿ ಜಿಲ್ಲಾಕಾರಿಗಳ ಜೊತೆ ದೂರವಾಣಿಯಲ್ಲಿ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದಿದ್ದೇನೆ. ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳಬೇಕೆಂದು ಸೂಚನೆ ಕೊಟ್ಟಿದ್ದೇನೆ. ಯಾರೊಬ್ಬರೂ ಅನಗತ್ಯವಾಗಿ ಪ್ರಚೋದನೆಗೆ ಒಳಗಾಗಬಾರದೆಂದು ಹೇಳಿದರು.

ಪರಿಸ್ಥಿತಿ ಕುರಿತಂತೆ ನಾನು ಗೃಹಸಚಿವರಾದ ಬಸವರಾಜ್ ಬೊಮ್ಮಾಯಿ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿದ್ದೇವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲರೂ ವರ್ತಿಸಬೇಕು. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಬೆಳಗಾವಿ ಜಿಲ್ಲಾಕಾರಿ ಎಂ.ಜಿ.ಹಿರೇಮಠ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಿಎಂ ಯಡಿಯೂರಪ್ಪ, ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದರು.

ಯಾವುದೇ ಕಾರಣಕ್ಕೂ ಪರಿಸ್ಥಿತಿ ಮೀರದಂತೆ ನೋಡಿಕೊಳ್ಳಬೇಕು. ಕೆಲವು ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತವೆ. ಇದಕ್ಕೆ ಅವಕಾಶ ಕೊಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ಕೊಟ್ಟರು.

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಿ. ಗಡಿಭಾಗಗಳಲ್ಲಿ ರಾಜ್ಯಕ್ಕೆ ಆಗಮಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ವಾಹನಗಳನ್ನು ಚೆಕ್‍ ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಿ ಒಳಬಿಡಬೇಕೆಂದು ಸೂಚಿಸಿದ್ದಾರೆ.

ಅನುಮಾನಾಸ್ಪದವಾಗಿ ಇಲ್ಲವೇ ಸಂಶಯಾಸ್ಪವಾಗಿ ಯಾರಾದರೂ ವರ್ತಿಸುತ್ತಿದ್ದರೆ ತಕ್ಷಣ ಅವರನ್ನು ವಿಚಾರಣೆಗೊಳಪಡಿಸಿ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಏನೇನು ಕ್ರಮ ಕೈಗೊಳ್ಳಬೇಕೋ ಎಲ್ಲವನ್ನೂ ತೆಗೆದುಕೊಳ್ಳಿ. ಪ್ರತಿಗಂಟೆಗೊಮ್ಮೆ ಪರಿಸ್ಥಿತಿ ಕುರಿತಂತೆ ಮಾಹಿತಿ ನೀಡಬೇಕೆಂದು ಸಿಎಂ ಜಿಲ್ಲಾಕಾರಿಗೆ ಸೂಚಿಸಿದ್ದಾರೆ.

ಈಗಾಗಲೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪರಿಸ್ಥಿತಿ ಕೈ ಮೀರದಂತೆ ಘಟನೆ ನಡೆದ ಸ್ಥಳದಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಂತೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ಆಯುಕ್ತರು, ಪೊಲೀಸ್ ವರಿಷ್ಠಾಕಾರಿ ಸೇರಿದಂತೆ ಹಲವು ಅಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಸಹಜಸ್ಥಿತಿಯಲ್ಲಿದೆ ಎಂದು ಜಿಲ್ಲಾಕಾರಿಯವರು ಸಿಎಂಗೆ ಮಾಹಿತಿ ನೀಡಿದ್ದಾರೆ.

Facebook Comments

Sri Raghav

Admin