ಬಿಗ್ ಬ್ರೇಕಿಂಗ್ : ಸಿಎಂ ಬಿಎಸ್ವೈಗೆ ಮತ್ತೆ ಕೊರೋನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.16- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ 2ನೇ ಬಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರು ಇಂದು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಅವರು ಅಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಕ್ಷೇತ್ರದ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರಿಗೆ ಬುಧವಾರ ಸಂಜೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಗೋಕಾಕ್‍ನಲ್ಲಿ ರೋಡ್ ಶೋ ನಡೆಸುವ ವೇಳೆ ತೀವ್ರ ಜ್ವರ ಕಾಣಿಸಿಕೊಂಡ ಕಾರಣ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಳಗಾವಿಯಲ್ಲೂ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲೇ ಬಿಎಸ್‍ವೈಗೆ ಜ್ವರ ಕಾಣಿಸಿಕೊಂಡಿತ್ತು.

ಹೀಗಾಗಿ ಅವರು ಅರ್ಧಕ್ಕೆ ರೋಡ್ ಶೋ ನಿಲ್ಲಿಸಿ ಬೆಂಗಳೂರಿಗೆ ಹಿಂತಿರುಗಿದ್ದರು. ಇಂದು ಬೆಳಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತಮ್ಮ ಅಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ್ದರು.

ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಕಾವೇರಿಯಿಂದ ದವಳಗಿರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಅವರು ತೆರಳಿದ್ದರು. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದೆ.

ಕೆಲ ದಿನಗಳ ಹಿಂದೆ ಅವರು ಎರಡು ಹಂತದ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಈ ಹಿಂದೆಯೂ ಬಿಎಸ್‍ವೈಗೆ ಕೊರೊನಾ ಪಾಸಿಟಿವ್ ಬಂದಿತ್ತು.

Facebook Comments

Sri Raghav

Admin