ನಾನಂತೂ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ : ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.22- ನಾನು ಕೇವಲ ಪಕ್ಷದ ಕಾರ್ಯಕರ್ತನಷ್ಟೆ. ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಅದನ್ನು ರಾಜ್ಯ ಉಸ್ತುವಾರಿ ರುಣ್ ಸಿಂಗ್‍ರನ್ನೇ ಕೇಳಬೇಕು ಎಂದಿದ್ದಾರೆ.

ಖಂಡಿತ ನಾನು ಮುಖ್ಯಮಂತ್ರಿ ಅಭ್ಯರ್ಥಿಯೂ ಅಲ್ಲ. ಆ ರೇಸ್‍ನಲ್ಲೂ ಇಲ್ಲ. ಆದರೆ ನನ್ನ ಹೆಸರು ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಮಠಾಧಿಪತಿಗಳ ಒತ್ತಿವಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ಮಠಾಧಿಪತಿಗಳ ಹಿಂದೆ ಯಾರದೋ ಕೈವಾಡ ಎಂಬ ಶಂಕೆ ಇದೆ ಇದನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಪರೋಕ್ಷವಾಗಿ ಬಿ.ವೈ.ವಿಜಯೇಂದ್ರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು.

Facebook Comments