ಟಿಪ್ಪು ಸುಲ್ತಾನ್ ವಿಶ್ವವಿದ್ಯಾಲಯ ಸ್ಥಾಪನೆಗೆ ಇಬ್ರಾಹಿಂ ಬೇಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.16- ಚಾಣಕ್ಯ ವಿಶ್ವವಿದ್ಯಾ ಲಯ ಸ್ಥಾಪನೆಗೆ ನಮ್ಮ ವಿರೋಧವಿಲ್ಲ. ಆದರೆ ಅದೇ ರೀತಿ ಟಿಪ್ಪು ಸುಲ್ತಾನ್ ವಿಶ್ವವಿದ್ಯಾಲಯ ಸ್ಥಾಪಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಆಗ್ರಹಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಚಾಣಕ್ಯನ ನೀತಿ ಅನುಸರಿಸಿ ವಿಶ್ವವಿದ್ಯಾಲಯ ಸ್ಥಾಪಿಸಲಿ. ಚಾಣಕ್ಯ ಪ್ರಜೆಗಳು, ರೈತರ ಬಗ್ಗೆ ಕಳಕಳಿ ಹೊಂದಿದ್ದವರು ಈ ಕೆಲಸ ಮಾಡುತ್ತಾರೆ ಎಂದರು.

ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಸರಿಯಾದ ಪ್ರಾತಿನಿಧ್ಯ ಸಿಗುತ್ತಿಲ್ಲ. ಮುಸ್ಲಿಂ ಸಮುದಾಯದವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಣೆ ಮಾಡಲಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 30 ತಿಂಗಳು ಪರಿಶಿಷ್ಟ ಜಾತಿಯವರಿಗೆ ಹಾಗೂ ಇನ್ನುಳಿದ 30 ತಿಂಗಳು ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಲಿ ಎಂದು ಸವಾಲು ಹಾಕಿದರು.

ಚಾಣಕ್ಯ ವಿಶ್ವವಿದ್ಯಾನಿಲಯ ಬೇಡ ಎನ್ನುವ ಸಿದ್ದರಾಮಯ್ಯ ಬಗ್ಗೆ ಏನೂ ಹೇಳುವುದಿಲ್ಲ. ಅವರು ದೊಡ್ಡವರು. ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಿಸಿದ್ದು ರಾಜಕೀಯಕ್ಕೋಸ್ಕರ. ನಾನು ಅಂದೇ ಜಯಂತಿ ವಿರೋಧಿಸಿದ್ದ. ಜಯಂತಿ ಆಚರಣೆ, ಫೋಟೊಗೆ ಹಾರ ಹಾಕಿ ಪೂಜೆ ಮಾಡುವ ಪದ್ಧತಿ ನಮ್ಮಲ್ಲಿ ಇಲ್ಲ ಎಂದು ಹೇಳಿದರು.

Facebook Comments

Sri Raghav

Admin