ರಿಲ್ಯಾಕ್ಸ್ ಮೂಡ್‍ನಲ್ಲಿ ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಮೈಸೂರು, ಜೂ.10- ರಾಜಕೀಯ ಜಂಜಾಟದಿಂದ ಹೊರಬರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಗರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದು, ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಪುತ್ರ ನಿಖಿಲ್ ಅವರು ನಾಯಕ ನಟನಾಗಿ ನಟಿಸುತ್ತಿರುವ ಸೀತಾರಾಮ ಕಲ್ಯಾಣ ಚಿತ್ರದ ಚಿತ್ರೀಕರಣ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಇದನ್ನು ವೀಕ್ಷಿಸಿದರು.

ಮುಖ್ಯಮಂತ್ರಿಗಳು ಸರ್ಕಾರಿ ವಾಹನವನ್ನು ಬಳಸದೆ, ಹೆಚ್ಚಿನ ಭದ್ರತೆ ಪಡೆಯದೆ, ಮೈಸೂರು ಜಿಲ್ಲಾಡಳಿತಕ್ಕೂ ಮಾಹಿತಿ ನೀಡದೆ ಸ್ವಂತ ಕಾರಿನಲ್ಲಿ ಬಂದಿದ್ದಾರೆ. ಅತ್ತ ಖಾತೆ ಹಂಚಿಕೆ ವಿಷಯದಲ್ಲಿ ಬೇಸರಗೊಂಡಿರುವ ಜಿ.ಟಿ.ದೇವೇಗೌಡ ಹಗೂ ಸಿ.ಎಸ್.ಪುಟ್ಟರಾಜು ಅವರನ್ನು ಸಂಜೆ ವೇಳೆಗೆ ಸಿಎಂ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin