ನಮ್ಮ ಸರ್ಕಾರಕ್ಕ ಯಾವುದೇ ಅಭದ್ರತೆ ಇಲ್ಲ : ಸಿಎಂ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಮೈಸೂರು, ಜ.14- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಅಭದ್ರತೆ ಉಂಟಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ಹಾಗೂ ದೆಹಲಿಯಲ್ಲಿರುವ ಶಾಸಕರು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಅವರು ನನಗೆ ಹೇಳಿಯೇ ಹೋಗಿದ್ದಾರೆ. ಹೀಗಾಗಿ ಸರ್ಕಾರ ಅಸ್ಥಿರಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಸಂಕ್ರಾಂತಿ ಮುಗಿದ ಬಳಿಕ ರಾಷ್ಟ್ರಪತಿ ಆಡಳಿತ ಬರುತ್ತದೆ ಎಂಬ ಮಾಹಿತಿ ಮಾಧ್ಯಮದಲ್ಲಿ ಬಂದಿದೆ. ಅವರಿಗೆ ಯಾರು ಕೊಟ್ಟಿದ್ದಾರೋ ಗೊತ್ತಿಲ್ಲ. ಯಾರಿಗೆ ಯಾವ ಲಾಭವಾಗುತ್ತದೆಯೋ ಗೊತ್ತಿಲ್ಲ.

ಮೂರು ಮಂದಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ದೆಹಲಿ ಹಾಗೂ ಮುಂಬೈಗೆ ಹೋಗಿರುವ ಶಾಸಕರು ತಮ್ಮ ಸ್ನೇಹಿತರೇ ಆಗಿದ್ದಾರೆ. ಸರ್ಕಾರ ಭದ್ರವಾಗುವುದಾದರೆ ತಾವು ಇಷ್ಟೊಂದು ಆರಾಮವಾಗಿರಲು ಸಾಧ್ಯವಾಗಿರುತ್ತಿತ್ತೇ ಎಂದು ಪ್ರಶ್ನಿಸಿದರು.

ಇದೇ 30ರೊಳಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವಂತಹ 8 ಲಕ್ಷ ರೈತರ ಸಾಲ ಪರಿಹಾರವಾಗಲಿದೆ. ಬಿಜೆಪಿಯವರು ರೈತರ ಬಗ್ಗೆ ನಾಮಕಾವಸ್ಥೆಯ ಹೇಳಿಕೆ ನೀಡುವುದು ಬೇಡ.

ನಾನು ರೈತರಿಗೆ ಯಾವ ರೀತಿ ಆಶ್ವಾಸನೆ ನೀಡಿದ್ದೆನೋ ಅದನ್ನು ಶಿರಸಾವಹಿಸಿ ಪಾಲಿಸುವುದು ನನ್ನ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಬೇಡಿಕೆಗಳನ್ನು ಈಡೇರಿಸಿಯೇ ತೀರುತ್ತೇನೆ ಎಂದು ಹೇಳಿದರು.

Facebook Comments

Sri Raghav

Admin