ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ. 29- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲ್ಲಿದ್ದಾರೆ.

ರಾಷ್ಟ್ರದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿ ಅವರು ನಾಳೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕಾರ : ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಕೇಂದ್ರದಲ್ಲಿ ಮತ್ತೆ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದ ಐತಿಹಾಸಿಕ ರೈಸೀನಾ ಹಿಲ್ಸ್ ಮುಂಭಾಗದಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಸಂಜೆ 7 ಗಂಟೆಗೆ ದೇಶದ ನೂತನ ಪ್ರಧಾನಿಗೆ ರಾಷ್ಟ್ರಪತಿ ರಾಮನಾಥ್‍ಕೋವಿಂದ್ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.

ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಆಗಮಿಸಲಿದ್ದಾರೆ. ರಷ್ಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಅನೇಕ ರಾಷ್ಟ್ರಗಳ ರಾಷ್ಟ್ರಾಧ್ಯಕ್ಷರು, ರಾಯಭಾರಿಗಳು ಭಾಗವಹಿಸಲಿದ್ದಾರೆ.

Facebook Comments

Sri Raghav

Admin