ಸಿಎಂ ಕುಮಾರಸ್ವಾಮಿ ಬಳಿ ಬಂದು ಸಹಾಯ ಕೇಳಿದ ವಿಕಲಚೇತನ ಮಹಿಳೆ..ಮುಂದೇನಾಯ್ತು ನೀವೇ ನೋಡಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ. 03: ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ.ಗಳ ಚೆಕ್ ವಿತರಿಸಿದರು.

ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ನೀಡಲು ವ್ಯವಸ್ಥೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಯವರಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಾಲು ಮರದ ತಿಮ್ಮಕ್ಕನ ಮನವಿಗೆ ಸ್ಪಂದನೆ :  ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು.

ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು.  ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin