ಗ್ರಾಮ ವಾಸ್ತವ್ಯ ಕುರಿತು ಇಂದು ಪೂರ್ವಭಾವಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.7- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೈಗೊಳ್ಳಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯ ಕುರಿತು ಇಂದು ಸಂಜೆ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ ಸಭೆ ನಡೆಯಲಿದ್ದು, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

ಮೊದಲಿಗೆ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಜೂ.21ರಿಂದ ಗ್ರಾಮ ವಾಸ್ತವ್ಯವನ್ನು ಆರಂಭಿಸಲಿರುವ ಮುಖ್ಯಮಂತ್ರಿ, ಜೂ.22ರಂದು ಕಲಬುರ್ಗಿ ಜಿಲ್ಲೆಯ ಅಬ್ಜಲ್‍ಪುರ ತಾಲ್ಲೂಕು, ಜೂ.28ರಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕು ಹಾಗೂ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಸಿಎಂ ಉದ್ದೇಶಿಸಿದ್ದಾರೆ.

ಗ್ರಾಮ ವಾಸ್ತವ್ಯ ಹೂಡುವ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Facebook Comments