ನ್ಯೂಜೆರ್ಸಿಯಿಂದ ಹೊರಟ ಸಿಎಂ, ನಾಳೆ ರಾತ್ರಿ ಬೆಂಗಳೂರಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.6- ಕಾಲಭೈರವೇಶ್ವರ ದೇಗುಲ ಶಂಕುಸ್ಥಾಪನೆಗಾಗಿ ಅಮೆರಿಕದ ನ್ಯೂಜೆರ್ಸಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಅಲ್ಲಿಂದ ಹೊರಟಿದ್ದು ನಾಳೆ ರಾತ್ರಿ ಬೆಂಗಳೂರು ತಲುಪಲಿದ್ದಾರೆ.

ಕಳೆದ ವಾರ ಆದಿಚುಂಚನಗಿರಿ ಮಠದ ಶ್ರೀ ಕಾಲಭೈರವೇಶ್ವರ ದೇಗುಲ ಸ್ಥಾಪನೆಗೆ ಅಮೆರಿಕಗೆ ತೆರಳಿದ ಅವರು, ಪ್ರವಾಸ ಮುಗಿಸಿ ಮರಳುತ್ತಿದ್ದು , ಅಮೆರಿಕದಿಂದ ದೆಹಲಿಗೆ ಬಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿಯವರು ಅಮೆರಿಕಾ ಪ್ರವಾಸಕ್ಕೆ ತೆರಳಿದಾಗಿನಿಂದಲೂ ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್‍ನ ಅತೃಪ್ತ ಶಾಸಕರು ರಾಜೀನಾಮೆ ನೀಡುವ ವಿಚಾರ ಸಾಕಷ್ಟು ಕೇಳಿ ಬಂದಿತ್ತು. ಅಲ್ಲಿಂದಲ್ಲೇ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿಯವರು ನಾನು ರಾಜಕೀಯ ವಿದ್ಯಮಾನವನ್ನು ಗಮನಿಸುತ್ತಿದ್ದೇನೆ ಎಂದು ಹೇಳಿದರು.

ಈ ನಡುವೆ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದು ತಿಳಿಸಿದ್ದರು. ಆದರೆ ಇಂದು ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಅತೃಪ್ತರ ಶಾಸಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮರಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆದಿದ್ದು , ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಈ ಎಲ್ಲಾ ಮಾಹಿತಿ ಪಡೆದಿರುವ ಮುಖ್ಯಮಂತ್ರಿ ನಗರಕ್ಕೆ ಮರಳಿದ ನಂತರ ಉಭಯ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

Facebook Comments

Sri Raghav

Admin