ರಾಜ್ಯಪಾಲರನ್ನು ಭೇಟಿ ಮಾಡುವರೇ ಸಿಎಂ ಮತ್ತು ಡಿಸಿಎಂ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.8- ಸಂಕಷ್ಟಕ್ಕೀಡಾಗಿರುವ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಸಂಜೆಯೊಳಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಪ್ರತ್ಯೇಕವಾಗಿ ತಮ್ಮದೇ ಆದ ರಣವೀಳ್ಯದೊಂದಿಗೆ ಚಟುವಟಿಕೆ ನಡೆಸಿದವು. ಆದರೆ ನಿರೀಕ್ಷಿತ ಫಲ ನೀಡಲಿಲ್ಲ.

ಈಗಾಗಲೇ ರಾಜೀನಾಮೆ ನೀಡಿ ಮುಂಬೈನಲ್ಲಿರುವ 10 ಮಂದಿ ಶಾಸಕರನ್ನು ವಾಪಸ್ ಕರೆತರಲು ನಡೆಸಿದ ಎಲ್ಲ ಪ್ರಯತ್ನಗಳು ವಿಫಲವಾಗಿದ್ದು, ಅಲ್ಲಿನ ಶಾಸಕರು ಯಾವುದೇ ಕಾರಣಕ್ಕೂ ಬರುವುದಿಲ್ಲ. ನಮ್ಮ ನಿರ್ಧಾರ ಅಚಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಈ ನಡುವೆ ಕಾಂಗ್ರೆಸ್‍ನ ಎಲ್ಲ ಸಚಿವರಿಂದಲೂ ರಾಜೀನಾಮೆ ಪಡೆದು ಅತೃಪ್ತರಿಗೆ ಸ್ಥಾನ ನೀಡುವ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‍ನ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ರಾಣಿಬೆನ್ನೂರಿನ ಆರ್.ಶಂಕರ್ ಆರಂಭದಲ್ಲಿ ಕಾಂಗ್ರೆಸ್ ನಾಯಕರ ಮಾತಿಗೆ ಒಪ್ಪಲಿಲ್ಲ. ನಂತರ ಅವರಿಂದಲೂ ರಾಜೀನಾಮೆ ಪಡೆಯಲಾಗಿದೆ.

ನಾನು ಪಕ್ಷೇತರ ಶಾಸಕ ಯಾವುದೇ ನಿರ್ಧಾರ ಕೈಗೊಳ್ಳಲು ನನ್ನ ಸ್ವತಂತ್ರವಿದೆ. ನನ್ನ ಮೇಲೆ ಒತ್ತಡ ಹೇರಬೇಡಿ ಎಂದು ಖಡಕ್ಕಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Facebook Comments