ಮಹಾ ಸಂಕಷ್ಟನಿಂದ ಮೈತ್ರಿ ಸರ್ಕಾರವನ್ನು ಪಾರು ಮಾಡಲು ಸಿಎಂ ದೇವರ ಮೊರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.16- ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವುದನ್ನು ಪಾರು ಮಾಡಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ.

ಇಂದು ಬೆಳಗ್ಗೆ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದರು. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಪೂಜೆ ಮಾಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಂತರ ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಸರ್ಕಾರ ರಕ್ಷಣೆಗೆ ನಡೆಸಿರುವ ಪ್ರಯತ್ನಗಳು, ಕಾಂಗ್ರೆಸ್ ನಾಯಕರು ನೀಡುತ್ತಿರುವ ಸಹಕಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ನಿರ್ಣಯ ಚರ್ಚೆಗೆ ಬರಲಿರುವ ಹಿನ್ನೆಲೆಯಲ್ಲಿ ತಾವು ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಗೌಡರಿಂದ ಸಲಹೆ, ಮಾರ್ಗದರ್ಶನವನ್ನು ಮುಖ್ಯಮಂತ್ರಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ