ಸಭೆಗಳಲ್ಲಿ ಮೊಬೈಲ್ ಬಳಸದಂತೆ ಸಿಎಂ ಕುಮಾರಸ್ವಾಮಿ ಕಟ್ಟುನಿಟ್ಟಿನ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--02

ಬೆಂಗಳೂರು. ಜೂ. 01 : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸುವ ಸಭೆಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಸಿಎಂ ರಾಜ್ಯ ಮುಖ್ಯ ಕಾರ್ಯದರ್ಶಿ ಮೂಲಕ ಎಲ್ಲಾ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಸಭೆಗಳಲ್ಲಿ ಮೊಬೈಲ್ ಬಳಕೆ ಬಳಕೆಯಿಂದ ಸಭೆಯ ನಡಾವಳಿ ಹಾಗೂ ಚರ್ಚೆಯ ಪ್ರಾಮುಖ್ಯತೆ ಕಡಿಮೆಯಾಗುವುದು ಗಮನಕ್ಕೆ ಬಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭಾಗವಹಿಸುವ ಸಭೆಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎನ್ನಲಾಗಿದೆ. ಒಂದು ವೇಳೆ ಮೊಬೈಲ್ ತಂದರೆ ಸಭೆಯ ಸಮನ್ವಯಾಧಿಕಾರಿಗೆ ಒಪ್ಪಿಸಿ ಸಭೆ ಮುಗಿದ ಬಳಿಕ ವಾಪಸ್ ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

Facebook Comments

Sri Raghav

Admin