ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ ಮಂಡನೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

HDK-Kumaraswamy--05

ಬೆಂಗಳೂರು,ಜೂ.2-ರಾಜ್ಯದ ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಹಾಗೂ ಹೊಸ ಬಜೆಟ್ ಮಂಡನೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಜಂಟಿ ಅಧಿವೇಶನವಾಗಿರುತ್ತದೆ. ರಾಜ್ಯ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ನಂತರ ಬಜೆಟ್ ಅಧಿವೇಶನ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಮೂರ್ನಾಲ್ಕುದಿನದಲ್ಲಿ ಬಜೆಟ್ ಪೂರ್ವ ಸಿದ್ಧತೆ ಕೈಗೊಳ್ಳಲಾಗುವುದು. ಹಿಂದಿನ ಸರ್ಕಾರ ಮಂಡಿಸಿರುವ ಬಜೆಟ್‍ನಲ್ಲಿ ಪ್ರಸ್ತಾಪವಾಗಿರುವ ಅಂಶಗಳನ್ನು ಒಳಗೊಂಡಂತೆ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿರುವ ಭರವಸೆಗಳು ಸೇರಿದಂತೆ ಹೊಸ ಬಜೆಟ್ ಮಂಡಿಸಲಾಗುವುದು.
ನೂತನ ಬಜೆಟ್‍ನಲ್ಲಿ ಹಳೆಯ ಕೆಲ ಯೋಜನೆಗಳ ಜೊತೆಗೆ ಹೊಸ ಕಾರ್ಯಕ್ರಮಗಳು ಸೇರ್ಪಡೆಯಾಗಲಿವೆ ಎಂದು ಹೇಳಿದರು.

Facebook Comments

Sri Raghav

Admin