ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗದಿಪಡಿಸುವ ಕುರಿತು ಸಿಎಂ ಹೇಳಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಖಾಸಗಿ ಶಾಲೆಗಳಲ್ಲಿ ‌ಶುಲ್ಕ ನಿಗಧಿಪಡಿಸುವ ಸಂಬಂಧ ಸದ್ಯದಲ್ಲೇ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಡವರ ಜೊತೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವುದಿಲ್ಲವೆಂದು ‌ ಖಾಸಗಿ ಶಾಲೆಗಳ ಒಕ್ಕೂಟ ಹೇಳಿರುವುದು ನನ್ನ  ಗಮನಕ್ಕೆ ಬಂದಿದೆ ಎಂದು ತಿಳಿಸಿದರು. ಸದ್ಯದಲ್ಲೇ ಶುಲ್ಕ ನಿಗಧಿಪಡಿಸುವ ಕುರಿತಾಗಿ  ನಾನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಚರ್ಚೆ ಮಾಡುತ್ತೇನೆ.ಕಾನೂನಿನ ಚೌಕಟ್ಟಿನೊಳಗೆ ಏನು ಮಾಡಲೋ ಸಾಧ್ಯವೋ ಅದನ್ನು ಮಾಡಲಾಗುವುದು ಎಂದರು.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಚಿವರು, ಸಂಸದರು, ಶಾಸಕರ ಜೊತೆ ಸರ್ಕಾರ ಹಾಗೂ ಪಕ್ಷದ ಸ್ಥಿತಿಗಳ ಬಗ್ಗೆ ಚಚೆ9 ನಡೆಸಲಿದ್ದಾರೆ ಎಂದು ವಿವರಿಸಿದರು.

ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಾಡಿಕೆ. ಸರಕಾರ ಇನ್ನು ಯಾವ ರೀತಿ ಉತ್ತಮವಾಗಿ ಕೆಲಸ ಮಾಡಬೇಕು? ಕೋವಿಡ್ ನಿರ್ವಹಣೆ, ಪಕ್ಷದ ಸಂಘಟನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಪ್ರತಿಯೊಬ್ಬರೂ ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು ಎಂದರು. ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ನೀಡಿರುವ ಹೇಳಿಕೆ ಕುರಿತಾಗಿ ಪ್ರತಿಕ್ರಿಯೆ ‌ನೀಡಿದ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮಿತ್ತಿಲ್ಲ ಎಂದು ತಿರುಗೇಟು ನೀಡಿದರು. ಬಗ

ದೇಶದ ಎಲ್ಲಾ ಕಡೆ ಕಾಂಗ್ರೆಸ್ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಹಗಲಕನಸು ಕಾಣುವುದು ಬೇಡ ಎಂದು ವ್ಯಂಗ್ಯವಾಡಿದರು.

Facebook Comments

Sri Raghav

Admin