ಬೆಂಗಳೂರಲ್ಲಿ ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಲ್ಲ : ಸಿಎಂ ಗುಡುಗು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.12-ಕಳೆದ ರಾತ್ರಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಕೋಮುಗಲಭೆ ಸಂಬಂಧ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಈಗಾಗಲೇ ಹಿರಿಯ ಪೊಲೀಸ್ ಅಕಾರಿಗಳ ಜೊತೆ ಮಾಹಿತಿ ಪಡೆದಿದ್ದೇನೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಿಎಂ ತಮ್ಮ ಟ್ವಿಟರ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ .

ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಪೊಲೀಸ್ ಠಾಣೆ ಮೇಲೆ ಕೆಲವು ಕಿಡಿಗೇಡಿಗಳು ಗಲಭೆ ನಡೆಸಿರುವುದು ಅತ್ಯಂತ ಖಂಡನೀಯ. ಇಂಥವರನ್ನು ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಇಂತಹ ಪ್ರಚೋದನೆ ಇಲ್ಲವೇ ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಗಲಭೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಜನರು ಈ ಸಂದರ್ಭದಲ್ಲಿ ಆವೇಷಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕು ಎಂದು ಬಿಎಸ್‍ವೈ ಮನವಿ ಮಾಡಿದ್ದಾರೆ.

Facebook Comments

Sri Raghav

Admin