ಬಿಗ್ ನ್ಯೂಸ್ : ವೃದ್ಧಾಪ್ಯವೇತನ 2000, ವಿಕಲಚೇತನರಿಗೆ 2500 ಮಾಸಾಶನ ಹೆಚ್ಚಳ : ಸಿಎಂ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಕರೇಗುಡ್ಡ,ಜೂ.26 : ಮುಂದಿನ ವರ್ಷದಿಂದ ಹಿರಿಯ ನಾಗರಿಕರಿಗೆ 1ಸಾವಿರದಿಂದ 2 ಸಾವಿರಕ್ಕೆ ಹಾಗೂ ಅಂಗವಿಕಲರಿಗೆ 2500 ರೂ. ಮಾಸಾಶನ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ‌ಬುಧವಾರ ಏರ್ಪಡಿಸಿದ್ದ ಜನಸ್ಪಂದನ,ಗ್ರಾಮವಾಸ್ತವ್ಯ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಮುಂಚೆ ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು‌1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ. ರಾಜ್ಯದಲ್ಲಿರುವ ಎಲ್ಲ ಜನರು ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನೆಲ್ಲ ಕೈಗೊಳ್ಳಲಾಗುವುದು ಎಂದರು.

ಕೃಷಿಯ ಅಭಿವೃದ್ಧಿ ಮಾಡಲಿಕ್ಕೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದರು.
ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

#ನವಲಿ ಬಳಿ ಜಲಾಶಯ ನಿರ್ಮಾಣ:
ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಶೀಘ್ರ ಚರ್ಚೆ ತುಂಗಾಭದ್ರಾ ಜಲಾಶಯದಲ್ಲಿ ಹೂಳು ತುಂಬಿದ ಪರಿಣಾಮ ಕೊನೆಯ ಅಂಚಿನ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಇದರಿಂದ ನಮ್ಮ ರೈತರು ತೀವ್ರ ತೊಂದರೆ ಅನುಭವಿಸುತ್ತಿರುವುದು ಗಮನದಲ್ಲಿದ್ದು, ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವರ ಮನವೋಲಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಈಗಾಗಲೇ ನವಲಿ ಬಳಿ ಸಮಾನಂತರ ಜಲಾಶಯ ನಿರ್ಮಾಣಕ್ಕಾಗಿ ಡಿಪಿಎಆರ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ ಅವರು ರಾಯಚೂರು ಜಿಲ್ಲೆಯ 10ಲಕ್ಷ ಎಕರೆ ಜಮೀನಿಗೆ ನನ್ನ ಅವಧಿಯಲ್ಲಿಯೇ ನೀರುಣಿಸಲಾಗುವುದು ಮತ್ತು ಜಿಲ್ಲೆಗೆ ಸಮಗ್ರ ನೀರಾವರಿ ಕಲ್ಪಿಸುವುದಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು. ಈ‌ ವರ್ಷ ಸಣ್ಣ ಮತ್ತು ಬೃಹತ್ ನೀರಾವರಿಗೆ 19ಸಾವಿರ‌ ಕೋಟಿ ರೂ.ತೆಗೆದಿರಿಸಲಾಗಿದೆ ಎಂದರು.

ಜಲಧಾರೆ ಯೋಜನೆ ಅಡಿ 1500ಕೋಟಿ ರೂ.ವೆಚ್ಚದಲ್ಲಿ ಜಿಲ್ಲೆಯ ಪ್ರತಿ ಮನೆಗೂ ಕುಡಿಯುವ ನೀರು ಒದಗಿಸಲಾಗುವುದು ಎಂದು ಹೇಳಿದ ಅವರು ಇಡೀ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನ ಸರಕಾರ 4 ಸಾವಿರ ಕೋಟಿ ರೂ. ಒದಗಿಸಿದೆ ಎಂದರು.

# ರೈತರ ಸಾಲಮನ್ನಾಗೆ ರಾಯಚೂರು ಜಿಲ್ಲೆಗೆ 272.22ಕೋಟಿ ರೂ. ಇದುವರೆಗೆ ಸಂದಾಯ:
ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಎಚ್ ಕೆಆರ್ಡಿಬಿ, ಬಿಸಿಎಂ ಇಲಾಖೆಗಳಿಗೆ ಸಂಬಂಧಿಸಿದ 8144.99 ಲಕ್ಷ ರೂ.ಗಳ 38ಕಾಮಗಾರಿಗಳು ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿಗಳು‌ ಇದೇ ಸಂದರ್ಭದಲ್ಲಿ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಸಾಲಮನ್ನಾ ಋಣಮುಕ್ತಪತ್ರ, ವಿವಿಧ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಸಚಿವರಾದ ವೆಂಕಟರಾವ ನಾಡಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮುಖ್ಯಮಂತ್ರಿಗಳಿಗೆ ಈಗಾಗಲೇ ಜಿಲ್ಲೆಯ ಬೇಡಿಕೆಗಳ ಪಟ್ಟಿಯನ್ನು ನೀಡಿದ್ದೇವೆ.
1500ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆ ಅಡಿ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರುನ ಒದಗಿಸುವುದಕ್ಕೆ ಅಸ್ತು ನೀಡಿದ್ದಾರೆ.

ನವಲಿ ಬಳಿ ಜಲಾಶಯ‌ ಒದಗಿಸುವುದಕ್ಕೆ ಸಂಬಂಧಿಸಿದಂತೆ ಡಿಪಿಎಆರ್ ರೂಪಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ರಾಯಚೂರಿನಲ್ಲಿ ಐಐಐಟಿಗೆ ಮೂಲಸೌಕರ್ಯ ಕಲ್ಪಿಸುವುದಕ್ಕೆ‌ ಸಿಎಂ ಅವರು ಹಸಿರು‌ ನಿಶಾನೆ ತೋರಿದ್ದಾರೆ. ರಾಯಚೂರು ವಿವಿ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಸಣ್ಣ ತೊಡಕೊಂದಿದ್ದು ಅದನ್ನು ಶೀಘ್ರವಾಗಿ ನಿವಾರಿಸಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಆಗಬೇಕಾದ ಆದ್ಯತಾ ಪಟ್ಟಿಗಳನ್ನು ಸಲ್ಲಿಸಿದ್ದು, ಅದನ್ನು ಮುಖ್ಯಮಂತ್ರಿಗಳು ಅನುಷ್ಠಾನ ಮಾಡುವುದಾಗಿ ತಿಳಿಸಿದ್ದಾರೆ ಎಂದರು. ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ತುಂಬಾ ಪರಿಣಾಮಕಾರಿಯಾಗಿದೆ ಎಂಬ ಮಾತುಗಳನ್ನು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವ್ಯಕ್ತಪಡಿಸಿದರು.
ಮಾನ್ವಿ ಶಾಸಕರು ಹಾಗೂ ಪ್ರವಾಸೋದ್ಯಮ ನಿಗಮ ನಿಯಮಿತದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ್ ಅವರು ಮಾತನಾಡಿ, ಗ್ರಾಮವಾಸ್ತವ್ಯಕ್ಕೆ ನನ್ನ ಕ್ಷೇತ್ರದ ಐತಿಹಾಸಿಕ ಕರೇಗುಡ್ಡ ಆಯ್ಕೆ ಮಾಡಿಕೊಂಡಿರುವುದು ಸಂತಸ ತಂದಿದೆ ಮತ್ತು ಇಡೀ ಗ್ರಾಮದಲ್ಲಿಯೇ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.

150ಕೋಟಿ ರೂ.ಗಳ ಅನುದಾನ ಇದುವರೆಗೆ ತಂದಿದ್ದು, ತಮ್ಮ ಮಾರ್ಗದರ್ಶನದ ಇನ್ನೂ ಹೆಚ್ಚು ಅನುದಾನ ನೀಡುವುದರ ಮೂಲಕ ಅಭಿವೃದ್ಧಿಪಡಿಸುವುದಾಗಿ ಅವರು ತಿಳಿಸಿದರು.

ಮಾನ್ವಿಯಲ್ಲಿ ಮಿನಿ ವಿಧಾನಸೌಧ, ತಾಲೂಕು ಕ್ರೀಡಾಂಗಣ ಮತ್ತು ಸರಕಾರಿ ಡಿಪ್ಲೊಮಾ ಕಾಲೇಜು ನಿರ್ಮಾಣ, ಕಲ್ಲೂರು ಮತ್ತು ಆತನೂರು ಕೆರೆ ಭರ್ತಿ, ಹೊಸ ತಾಲೂಕಾಗಿರುವ ಸಿರವಾರಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಮಾನ್ವಿ ವಿ್ಧಧಾನಸಭಾ ಕ್ಷೇತ್ರದ ಹಾಗೂ ಸಿರವಾರ ತಾಲೂಕಿನ ಕೊನೆಯ ಭಾಗದ ಭೂಮಿಗೆ ನೀರು ಒದಗಿಸಬೇಕು ಎಂಬುದು ಸೇರಿದಂತೆ ಮಾನ್ವಿಯ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಬೇಡಿಕೆಯ ಪಟ್ಟಿಯನ್ನು ಮುಖ್ಯಮಂತ್ರಿಗಳ ಮುಂದಿಟ್ಟರು.

ಪರಿಶಿಷ್ಟ ಪಂಗಡ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಮಾತನಾಡಿ, ಮುಖ್ಯಮಂತ್ರಿಗಳು ತಾಯಿಯ ಹೃದಯವಂತ ಇರುವ ವ್ಯಕ್ತಿ. ಅವರು ನನ್ನ ಕ್ಷೇತ್ರಕ್ಕೆ ಇದಿವರೆಗೆ 500ಕೋಟಿ ರೂ.ಅನುದಾನ ಒದಗಿಸಿದ್ದಾರೆ ಎಂದರು. ಪ್ರತಿ ಪಕ್ಷಗಳ ನಡೆಸುತ್ತಿರುವ ಕುತಂತ್ರ ಆಟ ಫಲಿಸುವುದಿಲ್ಲ. ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿರಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್.ಭೋಸರಾಜು ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಾ.ರಾ.ಮಹೇಶ, ಉಗ್ರಾಣ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಪ್ರತಾಪಗೌಡ ಪಾಟೀಲ್, ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಡಿ.ಎಸ್.ಹೂಲಿಗೇರಿ,ಶಾಸಕ ಅಮರೇಗೌಡ ಬಯ್ಯಾಪುರ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ, ಶಾಸಕ ಬಸವರಾಜ ಪಾಟೀಲ ಇಟಗಿ, ನಕ್ಕುಂದಿ ಗ್ರಾ

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin