ಬಿಜೆಪಿಯಿಂದ ಪ್ರತಿ ಕ್ಷೇತ್ರಕ್ಕೂ ಉಸ್ತುವಾರಿಗಳ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.19- ಶತಾಯಗತಾಯ ಉಪಚುನಾವಣೆಯನ್ನು ಗೆದ್ದು ಸರ್ಕಾರ ಹಾಗೂ ಕುರ್ಚಿಯನ್ನು ಗಟ್ಟಿ ಮಾಡಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿ ಕ್ಷೇತ್ರಕ್ಕೂ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. 15 ವಿಧಾನಸಭಾ ಕ್ಷೇತ್ರಗಳಿಗೂ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರನ್ನು ನೇಮಕ ಮಾಡಲಾಗಿದೆ.

ಆಯಾ ಕ್ಷೇತ್ರಗಳಲ್ಲಿರುವ ಜಾತಿ ಆಧಾರದ ಮೇಲೆಯೇ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಇದೇ 22ರಿಂದ ಡಿಸೆಂಬರ್ 3ರವರೆಗೆ ಪ್ರತಿಯೊಬ್ಬರು ಕ್ಷೇತ್ರಗಳಲ್ಲಿ ಅಭ್ಯರ್ಥಿ ಪರ ಪ್ರಚಾರ ನಡೆಸುವಂತೆ ಸಿಎಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ತಮಗೆ ನಿಗದಿಪಡಿಸಿರುವ ಕ್ಷೇತ್ರಗಳನ್ನು ಹೊರತುಪಡಿಸಿ ಯಾರೊಬ್ಬರು ಕ್ಷೇತ್ರ ಬಿಟ್ಟು ಕದಲಬಾರದು. ಒಂದು ವೇಳೆ ತುರ್ತು ಕಾರ್ಯವಿದ್ದರೆ ಮಾತ್ರ ತೆರಳಬೇಕು. ಆಯಾ ಜಿಲ್ಲಾ ಉಸ್ತುವಾರಿಗಳಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದ್ದಾರೆ.

ಯಾವ ಕ್ಷೇತ್ರಕ್ಕೆ ಯಾರು ಉಸ್ತುವಾರಿಗಳು:
1. ಅಥಣಿ – ಸಚಿವ ಕೆ.ಎಸ್. ಈಶ್ವರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ.
2. ಕಾಗವಾಡ -ಸಚಿವ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಶಾಸಕರಾದ ಪಿ. ರಾಜೀವ್, ಅರವಿಂದ ಬೆಲ್ಲದ್.
3. ಗೋಕಾಕ್ – ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಎ.ಎಸ್.ಪಾಟೀಲ್ ನಡಹಳ್ಳಿ.
4. ಯಲ್ಲಾಪುರ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಅನಂತಕುಮಾರ್ ಹೆಗಡೆ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜÁ.
5. ಹಿರೇಕೆರೂರು – ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಯು.ಬಿ. ಬಣಕಾರ್.
6. ರಾಣೆಬೆನ್ನೂರು – ಸಚಿವ ಜಗದೀಶ್ ಶೆಟ್ಟರ್, ಸಚಿವ ಪ್ರಭು ಚೌಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಶಿವಮೊಗ್ಗ ಬಿಜೆಪಿ ಮುಖಂಡ ಗಿರೀಶ್ ಪಾಟೀಲ.
7. ವಿಜಯನಗರ -ಡಿಸಿಎಂ ಗೋವಿಂದ ಕಾರಣಜೋಳ, ಎಂಎಲ್‍ಸಿ ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಪರಾಜಿತ ಅಭ್ಯರ್ಥಿ ಗವಿಯಪ್ಪ.
8. ಚಿಕ್ಕಬಳ್ಳಾಪುರ – ಸಚಿವ ಸಿ.ಟಿ.ರವಿ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ಸಂಸದ ಬಿ.ಎನ್.ಬಚ್ಚೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಂಜುನಾಥ್.
9. ಕೆ.ಆರ್.ಪುರಂ – ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ.
10. ಯಶವಂತಪುರ – ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ.ಕೃಷ್ಣಪ್ಪ, ಮಾಜಿ ಎಂಎಲ್‍ಸಿಗಳಾದ ಅಶ್ವಥ್ ನಾರಾಯಣ, ಜಗ್ಗೇಶ್.
11. ಮಹಾಲಕ್ಷ್ಮಿಲೇಔಟ್ – ಸಚಿವ ವಿ. ಸೋಮಣ್ಣ, ಸಚಿವ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಖಜಾಚಿ ಸುಬ್ಬನರಸಿಂಹ
12. ಶಿವಾಜಿನಗರ – ಬೆಂಗಳೂರು ಮಹಾನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಎಸ್. ಮುನಿರಾಜು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಶಾಸಕ ಎಸ್. ರಘು.
13. ಹೊಸಕೋಟೆ – ಡಿಸಿಎಂ ಡಾ.ಅಶ್ವಥ್ ನಾರಾಯಣ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್. ಅರ್. ವಿಶ್ವನಾಥ್, ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ.
14. ಕೆ.ಆರ್. ಪೇಟೆ – ಸಚಿವ ಜೆ.ಸಿ. ಮಾಧುಸ್ವಾಮಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ, ಶಾಸಕ ಪ್ರೀತಂಗೌಡ.
15. ಹುಣಸೂರು – ಸಚಿವ ಶ್ರೀರಾಮುಲು, ಮಾಜಿ ಸಚಿವ ವಿಜಯ್ ಶಂಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್.

Facebook Comments