ಅರಮನೆ ಮೈದಾನದಲ್ಲಿ ಬಿಎಸ್‍ವೈ ಅಭಿಮಾನಿಗಳಿಂದ ಅಭಿನಂದನಾ ಸಮಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.26- ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 77ನೇ ವಸಂತಕ್ಕೆ ಕಾಲಿಡಲಿದ್ದು, ಅಭಿಮಾನಿಗಳ ಬಳಗ ವಿಶೇಷ ಅಭಿನಂದನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.  ಅರಮನೆ ಮೈದಾನದಲ್ಲಿ ಸಂಜೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ಮುಖಂಡರು, ಸಾಹಿತಿಗಳು ಹಾಗೂ ಬಿಎಸ್‍ವೈ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಯಡಿಯೂರಪ್ಪನವರ ಹೋರಾಟ, ರಾಜಕೀಯ ಹಿನ್ನಲೆ ಕುರಿತಂತೆ ವಿವಿಧ ಸಾಹಿತಿಗಳು, ಬರಹಗಾರರು ರಚಿಸಿರುವ ಅಭಿನಂದನಾ ಗ್ರಂಥ ನಾಳೆ ಬಿಡುಗಡೆಯಾಗಲಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸಾಹಿತಿ ಸಿದ್ದಲಿಂಗಯ್ಯ, ಸಚಿವರು , ಶಾಸಕರು ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.  ಇಂದೊಂದು ಪಕ್ಷಾತೀತವಾಗಿ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗಿದೆ.

Facebook Comments