ಬೆಂಗಳೂರಲ್ಲಿ ಕೊರೋನಾ ಕಂಟ್ರೋಲ್ ಗೆ ಅಷ್ಟದಿಕ್ಪಾಲಕರಿಗೆ ಜವಾಬ್ದಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.9- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರವನ್ನು ಎಂಟು ವಲಯಗಳನ್ನಾಗಿ ವಿಂಗಡಿಸಿ ಒಬ್ಬೊಬ್ಬ ಸಚಿವರಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, 8 ವಲಯಗಳನ್ನು ವಿಂಗಡಿಸಿ ಒಬ್ಬೊಬ್ಬ ಸಚಿವರನ್ನು ಕೊರೊನಾ ನಿಯಂತ್ರಣಕ್ಕಾಗಿ ನೇಮಿಸಲಿದ್ದಾರೆ.

ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಕೆ.ಗೋಪಾಲಯ್ಯ, ಎಸ್.ಸುರೇಶ್‍ಕುಮಾರ್, ಭೈರತಿ ಬಸವರಾಜ್, ಡಾ.ಅಶ್ವಥ್ ನಾರಾಯಣ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಕೂಡ ಈ ತಂಡದಲ್ಲಿರುತ್ತಾರೆ.

ಒಟ್ಟು ಎಂಟು ವಲಯಗಳಲ್ಲಿ ಈ ಸಚಿವರು ಜವಾಬ್ದಾರಿ ವಹಿಸಿಕೊಂಡು ಕೊರೊನಾ ನಿಯಂತ್ರಣ ಮಾಡಲು ಕೆಲಸ ಮಾಡಬೇಕು. ಸಚಿವರಿಗೆ ಶಾಸಕರು, ಬಿಬಿಎಂಪಿ ಸದಸ್ಯರು, ರಾಜ್ಯಸಭಾ ಹಾಗೂ ವಿಧಾನಸಭಾ ಸದಸ್ಯರು ಕೂಡ ಇದರಲ್ಲಿ ಪಾಲ್ಗೊಳ್ಳಬೇಕು.  ಯಾವ ಸಚಿವರಿಗೆ, ಯಾವ ವಲಯ ಎಂಬುದನ್ನು ಸಂಜೆಯೊಳಗೆ ಮುಖ್ಯಮಂತ್ರಿ ಯಡಿಯೂರಪ್ಪ ಜವಾಬ್ದಾರಿ ಹಂಚಿಕೆ ಮಾಡಲಿದ್ದಾರೆ.

# ಬೆಂಗಳೂರಿನಲ್ಲಿ ಕೊರೋನ ನಿಯಂತ್ರಿಸಲು 8 ವಲಯಗಳಾಗಿ ವಿಂಗಡನೆ :
ಬೆಂಗಳೂರಿನಲ್ಲಿ ಕೊರೋನ ನಿಯಂತ್ರಿಸಲು 8 ವಲಯಗಳಾಗಿ ವಿಂಗಡಿಸಲಾಗಿದ್ದು ಪ್ರತಿವಲಯಕ್ಕೆ ಒಬ್ಬ ಸಚಿವರುಗಳಂತೆ ಡಾ.ಅಶ್ವತ್ಥ ನಾರಾಯಣ್, ಆರ್.ಅಶೋಕ್, ಸುರೇಶ್ ಕುಮಾರ್, ಸೋಮಣ್ಣ, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಗೋಪಾಲಯ್ಯ ಹಾಗೂ ಎಸ್.ಆರ್.ವಿಶ್ವನಾಥ್ ಸೇರಿದಂತೆ ಶಾಸಕರು, ಒಬ್ಬ ಹಿರಿಯ ಐಎ‌ಎಸ್ ಅಧಿಕಾರಿ, ಕಾರ್ಪೊರೇಟರ್ ಗಳನ್ನೊಳಗೊಂಡ ಟಾಸ್ಕ್ ಫೋರ್ಸ್‌ನ ತಂಡಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಸುಧಾಕರ್ ತಿಳಿಸಿದರು. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಟ್ರೇಸಿಂಗ್ ಮತ್ತು ಟ್ರ್ಯಾಕಿಂಗ್ ಮಾಡಲು ಕಷ್ಟಸಾಧ್ಯವಾಗಿದೆ. ಇನ್ನು ಮುಂದೆ ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸುಧಾಕರ್ ಹೇಳಿದರು.

Facebook Comments