6 ತಿಂಗಳ ನಂತರ ತವರು ಜಿಲ್ಲೆಗೆ ಸಿಎಂ ಬಿಎಸ್‍ವೈ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.31- ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ತವರು ಜಿಲ್ಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಭರ್ತಿಯಾಗಿರುವ ಭದ್ರೆಗೆ ಬಾಗಿನ ಅರ್ಪಿಸಲಿದ್ದಾರೆ.

ತವರು ಜಿಲ್ಲೆ ಶಿವಮೊಗ್ಗಕ್ಕೆ ಸೆ.2ರಂದು 11 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 12.15ಕ್ಕೆ ಲಕ್ಕವಳ್ಳಿಯ ಭದ್ರಾ ಜಲಾಶಯದ ಹೆಲಿಪ್ಯಾಡ್‍ಗೆ ಬಂದಿಳಿಯಲಿದ್ದಾರೆ. ಭರ್ತಿಯಾಗಿರುವ ಭದ್ರೆಯ ಒಡಲಿಗೆ ಬಾಗಿನ ಅರ್ಪಿಸಲಿರುವ ಸಿಎಂ 1.45ಕ್ಕೆ ಅಲ್ಲಿಂದ ನಿರ್ಗಮಿಸಿ, ಇತರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಆನ್‍ಲೈನ ಮೂಲಕ ಗೃಹ ಕಚೇರಿ ಕೃಷ್ಣಾದಿಂದಲೇ ಚಾಲನೆ ನೀಡಿದ್ದ ಬಿಎಸ್‍ವೈ, ಇತರ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಹೋಗಲು ಸಾಧ್ಯವಾಗಿರಲಿಲ್ಲ. ಇದೀಗ 6 ತಿಂಗಳ ನಂತರ ತವರು ಜಿಲ್ಲೆಗೆ ಸಿಎಂ ತೆರಳುತ್ತಿದ್ದು, ಸಿಎಂ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

Facebook Comments