ಸೌರಶಕ್ತಿ ಚಾಲಿತ ಅರ್ಕಾ ತ್ರಿಚಕ್ರ ಸೈಕಲ್ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.9- ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸೌರಶಕ್ತಿ ಚಾಲಿತ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವ ಅರ್ಕಾ ತ್ರಿಚಕ್ರ ಸೈಕಲ್‍ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವತಿಯಿಂದ ಪರಿಶಿಷ್ಟ ಜನಾಂಗಕ್ಕ ಉಪಯೋಜನೆಯಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇದು ಆತ್ಮನಿರ್ಭರ ಯೋಜನೆಗೆ ಪೂರಕವಾಗಿದೆ. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಈ ಸೌರಶಕ್ತಿ ವಾಹನವನ್ನು ಸಂಶೋಧಿಸಿ ಅಭಿವೃದ್ಧಿಪಡಿಸಿದೆ ಎಂದು ಹೇಳಿದರು.

ಈ ಯೋಜನೆಯಿಂದ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುವ ಪರಿಶಿಷ್ಟ ಜನಾಂಗದ ಫಲಾನುಭವಿಗಳಿಗೆ ಸಹಕಾರಿಯಾಗಲಿದೆ. ಸೌರಶಕ್ತಿ ದ್ವಿಚಕ್ರ ವಾಹನ ಸಂಪೂರ್ಣ ಚಾರ್ಜ್ ಮಾಡಿದರೆ ಸುಮಾರು 50 ಕಿ,ಮೀ. ವರೆಗೆ ನಿರಂತರವಾಗಿ ಸಂಚರಿಸಬಹುದು.

ಇದರಿಂದ ವ್ಯಾಪಾರಕ್ಕೆ ಸಹಕಾರಿಯಾಗಲಿದೆ. ಮಾತ್ರವಲ್ಲ ಗುಣಮಟ್ಟದ ತರಕಾರಿ ಮತ್ತು ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸಬಹದು, ಕಡಿಮೆ ವಧಿಯಲ್ಲಿ ಹೆಚ್ಚು ಗ್ರಾಹಕರನ್ನು ತಲುಪುವುದರಿಂದ ಹೆಚ್ಚು ಲಾಭಗಳಿಸಬಹುದು. ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ತೋಟಗಾರಿಕೆ ಬೆಳಗಳಲ್ಲಿ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದು, ಕೃಷಿಕರಿಗೆ ಅಗತ್ಯ ಮಾರ್ಗ ದರ್ಶನ ನೀಡುತ್ತಿದೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

Facebook Comments