ಹತ್ಯೆಗೊಳಗಾದ ಮೂವರು ಅರ್ಚಕರ ಕುಟುಂಬಗಳಿಗೆ ತಲಾ ಸಿಎಂ 5 ಲಕ್ಷ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.11- ಮಂಡ್ಯ ಜಿಲ್ಲೆ ಗುತ್ತಲಿನ ಅರರ್ಕೇಶ್ವರ ದೇವಾಲಯದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮೂವರು ಅರ್ಚಕರ ಕುಟುಂಬಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಂಡ್ಯದ ಅರಕೇಶ್ವರ ದೇವಸ್ಥಾನದ ಅರ್ಚಕರಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ ಎಂದು ವಿಷಾದಿಸಿದ್ದಾರೆ.

Facebook Comments