ತಿರುಪತಿಯಲ್ಲಿ ಕರ್ನಾಟಕ ಭವನಕ್ಕೆ ನಾಳೆ ಸಿಎಂ ಬಿಎಸ್‍ವೈ ಶಂಕು ಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23- ಶ್ರೀ ಕ್ಷೇತ್ರ ತಿರುಪತಿಯಲ್ಲಿ ಕರ್ನಾಟಕ ಭವನ ನಿರ್ಮಾಣದ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಲು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಂಧ್ರಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಸಂಜೆ 5 ಗಂಟೆಗೆ ವಿಶೇಷ ವಿಮಾನದ ಮೂಲಕ ತಿರುಪತಿಗೆ ತೆರಳಿ ಅಧಿಕೃತ ಕಾರ್ಯಕ್ರಮದೊಂದಿಗೆ ದೇವರ ದರ್ಶನ ಪಡೆಯಲಿದ್ದಾರೆ.

ರಾತ್ರಿ ಸುಮಾರು 7.15ಕ್ಕೆ ತಿರುಮಲದ ಪದ್ಮಾವತಿ ಅತಿಥಿ ಗೃಹದಲ್ಲಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಜೊತೆ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.  ನಾಳೆ ಬೆಳಗ್ಗೆ 6.20ಕ್ಕೆ ಸಿಎಂ ಯಡಿಯೂರಪ್ಪ ಅವರು ತಿರುಮಲದಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಕರ್ನಾಟಕ , ಆಂಧ್ರಪ್ರದೇಶ ಮುಖ್ಯಮಂತ್ರಿಗಳು ಪಾಲ್ಗೊಳ್ಳುವರು.

ನಂತರ ಬೆಳಗ್ಗೆ 10 ಗಂಟೆಗೆ ತಿರುಪತಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸಾಗಲಿದ್ದು, ವಿಧಾನಸಭೆ ಕಲಾಪದಲ್ಲಿ ಭಾಗಿಯಾಗಲಿದ್ದಾರೆ. ತಿರುಪತಿಯಲ್ಲಿ ಹಾಲಿ ಇರುವ ಕರ್ನಾಟಕ ಭವನ ಜೊತೆ 7.5ಎಕರೆ ಜಾಗದಲ್ಲಿ ಈ ವಸತಿ ಗೃಹ ನಿರ್ಮಾಣವಾಗುತ್ತಿದ್ದು, ತಿರುಮಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದಿಂದ ಭಕ್ತರು ತೆರಳುತ್ತಿರುತ್ತಾರೆ.

ಆದರೆ ಇವರಲ್ಲಿ ಅನೇಕರು ಕರ್ನಾಟಕ ಭವನದ ಸೌಲಭ್ಯ ಸಿಗದೆ ವಂಚಿತರಾಗುತ್ತಿದ್ದರು. ಇದನ್ನು ಮನಗಂಡು ರಾಜ್ಯ ಸರ್ಕಾರ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ನಿರ್ಮಿಸಲು ಮುಂದಾಗಿದೆ.

Facebook Comments