ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಬಜೆಟ್‍ನಲ್ಲಿ 100 ಕೋಟಿ: ಸಿಎಂ ಬಿಎಸ್‌ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.27- ಪೊಲೀಸ್ ಇಲಾಖೆ ಆಧುನಿಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಸಮುದಾಯ ಭವನ ಹಾಗೂ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶಲಾಯದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪೊಲೀಸ್ ವ್ಯವಸ್ಥೆ ಅತ್ಯುತ್ತಮವಾಗಿದೆ. ಅದನ್ನು ಇನ್ನಷ್ಟು ಶಸಕ್ತಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಪ್ರಯೋಗಾಲಯದ ಪ್ರಯೋಜನ ಸಮಾಜಕ್ಕೆ ದೊರೆಯಲಿ ಎಂದು ಆಶೀಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಂಡವರು ದೂರವಾಣಿ ಕರೆ ಮಾಡಿದರೆ ಸಾಕು ತಕ್ಷಣವೇ ಕೇಸು ದಾಖಲಿಸಿಕೊಂಡು ತೊಂದರೆಗೊಳಗಾದವರು ಮತ್ತು ಅಪರಾಧ ಮಾಡಿದವರ ಎರಡೂ ಖಾತೆಗಳನ್ನು ಜಪ್ತಿ ಮಾಡುವ ವಿನೂತನ ಪ್ರಯತ್ನವನ್ನು ರಾಜ್ಯ ಪೊಲೀಸರು ಕೈಗೆತ್ತಿಕೊಂಡಿದ್ದಾರೆ ಎಂದು ಹೇಳಿದರು.

ಸೈಬರ್ ಕ್ರೈಂ ವಿಷಯದಲ್ಲಿ ಕರ್ನಾಟಕ ಸರ್ಕಾರ ಹೆಚ್ಚು ಅಭಿವೃದ್ದಿ ಸಾಸಿದೆ. ದೇಶದಲ್ಲೇ ಪ್ರಥಮ ಬಾರಿಗೆ ಪೊಲೀಸ್ ಸಹಾಯವಾಣಿ 100ಗೆ ಕರೆ ಮಾಡಿ ಸೈಬರ್ ಕ್ರೈಂನ ದೂರುಗಳನ್ನು ದಾಖಲಿಸುವ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂದರು. ಬ್ಯಾಂಕಿಂಗ್ ವಂಚನೆ ಪ್ರಕರಣಗಳಲ್ಲಿ ತೊಂದರೆಗೊಳಗಾದವರು ಕರೆ ಮಾಡಿದ ತಕ್ಷಣ ಅಕೌಂಟನ್ನು ಸೀಸ್ ಮಾಡುವುದು ಮತ್ತು ಅಪರಾಯನ್ನು ಪತ್ತೆಹಚ್ಚಿ ಆತನ ಖಾತೆಯನ್ನೂ ಜಪ್ತಿ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಇದಕ್ಕಾಗಿ ಆರ್‍ಬಿಐ, ಬ್ಯಾಂಕರ್ಸ್‍ಗಳ ಜತೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಮುಂದಿನ ಬಜೆಟ್‍ನಲ್ಲಿ 100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈವರೆಗೂ ನಾವು ಸಲ್ಲಿಸಿದ ಪ್ರಸ್ತಾವನೆಯನ್ನು ಒಪ್ಪಿಕೊಂಡಿದ್ದಾರೆ. ಆಧುನೀಕರಣದ ಪ್ರಸ್ತಾವನೆಯನ್ನೂ ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಅಪರಾಧಗಳನ್ನು ಪತ್ತೆಹಚ್ಚಲು ಆಧುನಿಕ ತಂತ್ರಜ್ಞಾನ ಬಳಸುತ್ತೇವೆ. ತಂತ್ರಜ್ಞಾನ ಹೆಚ್ಚಾದಂತೆ ಅಪರಾಧಗಳೂ ಹೆಚ್ಚಾಗುತ್ತಿವೆ. ಮತ್ತೆ ಅವುಗಳನ್ನು ಮಟ್ಟ ಹಾಕಲು ತಂತ್ರಜ್ಞಾನದ ಮೊರೆ ಹೋಗುತ್ತಿದ್ದೇವೆ. ದೇಶದಲ್ಲೇ ನಾವು ಅತ್ಯಾಧುನಿಕವಾದ ಪೊರೆನ್ಸಿಕ್ ಪ್ರಯೋಗಾಲಯವನ್ನು ಹೊಂದಿದ್ದೇವೆ ಎಂದು ಹೇಳಿದರು.

ಈವರೆಗೂ ಡಿಎನ್‍ಎ ಎಕ್ಸಾಟ್ರಕ್ಷನ್ ಮತ್ತು ಬೆರಳಚ್ಚು ಪ್ರಯೋಗಾಲಯಕ್ಕೆ ಮಾತ್ರ ಸೀಮಿತವಾಗಿದ್ದ ಈ ಕಚೇರಿಯನ್ನು ಆಧುನೀಕರಣಗೊಳಿಸಿದ್ದು, ಡಿಜಿಟಲ್ ನಾರ್ಕೊಟಿಕ್ಸ್ ಡಿಟೆಕ್ಷನ್ ಮತ್ತು ಅತ್ಯಾಧುನಿಕವಾದ ಸೈಬರ್ ಅಪರಾಧಗಳ ಪ್ರಯೋಗಾಲಯವನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿನ ಆಧುನಿಕ ವ್ಯವಸ್ಥೆಯನ್ನು ಬಳಸಿಕೊಂಡು ಕರಾರುವಕ್ಕಾಗಿ ಸಾಕ್ಷ್ಯಗಳನ್ನು ಕ್ರೂಢೀಕರಿಸಿ ಆಧುನಿಕ ಅಪರಾಧಗಳಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ನಡೆಸಲಾಗುವುದು ಎಂದರು.

ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದ್ದು, ಅದನ್ನು ಬೇರುಸಮೇತ ಕಿತ್ತುಹಾಕುವ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್ ಮಾತನಾಡಿ, ಅಪರಾಧಗಳು ನಡೆದಾಗ ಪ್ರಯೋಗಾಲಯದ ವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸೀನ್ ಆಫ್ ಕ್ರೈಂಅನ್ನು ಪರಿಶೀಲಿಸುವ ವ್ಯವಸ್ಥೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ ಬಹಳಷ್ಟು ಅಪರಾಧಗಳನ್ನು ಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದರು.

Facebook Comments