ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ : ಸಿಎಂ ಬಿಎಸ್‍ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.2- ಇಂದು ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಪ್ರಮುಖರ ಜೊತೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಗೃಹಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಂಜೆ ಪಕ್ಷದ ಪ್ರಮುಖರ ಕೋರ್‍ಕಮಿಟಿ ಸಭೆ ಜೊತೆ ಕಾರ್ಯಕಾರಿಣಿ ಸಭೆಯೂ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನಗರಕ್ಕೆ ಆಗಮಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್‍ಕಮಿಟಿ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾನು ಮತ್ತು ಅವರು ಜೊತೆಯಲ್ಲೇ ಶಿವಮೊಗ್ಗಕ್ಕೆ ತೆರಳುತ್ತಿದ್ದೇವೆ. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇಂದು ರಾಜ್ಯದ 5 ಜಿಲ್ಲೆಗಳಲ್ಲಿ ಕೊರೊನಾ ಡ್ರೈರನ್ ಆರಂಭವಾಗಿದೆ. ಪ್ರಾರಂಭಿಕ ಹಂತದಲ್ಲಿ ಸಣ್ಣಪುಟ್ಟ ಗೊಂದಲಗಳು ಉಂಟಾಗಿರಬಹುದು. ಸದ್ಯಕ್ಕೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಬಹುತೇಕ ಯಶಸ್ವಿಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ವಚ್ರ್ಯುವಲ್ ಮೂಲಕ 2020-21ರ ಯುವಜನೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ತೋಟಗಾರಿಕಾ ಮೇಳಕ್ಕೂ ಚಾಲನೆ ಕೊಟ್ಟರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ತೋಟಗಾರಿಕಾ ಸಚಿವ ನಾರಾಯಣಗೌಡ, ಶಾಸಕ ವೀರಣ್ಣ ಚರಂತಿಮಠ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್, ತೋಟಗಾರಿಕಾ ವಿವಿ ಕುಲಪತಿ ಡಾ.ಇಂದ್ರೇಶ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿನಾರಾಯಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್, ಗಿರೀಶ್ ಹೊಸೂರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments