ಬಿಎಸ್‍ವೈಗೆ ಎಚ್‍ಡಿಕೆ ಟಾಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಿನ್ನೆಯಷ್ಟೇ ಕುಮಾರಸ್ವಾಮಿ ವಿರುದ್ದ ಅವರದು ತಂತಿ ಮೇಲಿನ ನಡೆಗೆ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಮನೆ ಮಠ ಕಟ್ಟಿಕೊಡೋಕೆ ನಿಮ್ಮ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಹೇಳಿದ್ದಾರೆ.

ಅತೃಪ್ತ ಶಾಸಕರನ್ನುಅಡ್ಡದಾರಿಯಲ್ಲಿ ತೃಪ್ತಿಪಡಿಸಿ ಮುಖ್ಯಮಂತ್ರಿ ಪದವಿಗೆ ಏರಿದ ಯಡಿಯೂರಪ್ಪನವರೇ, ತಂತಿ ಮೇಲಿಂದಲೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೆ ನೋಡಿ ಅವರ ನೆರವಿಗೆ ಧಾವಿಸಿ ಎಂದರು.

Facebook Comments